ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿ ರಕ್ತದಾನ

Blood Donation Benefits: ರಕ್ತದಾನವನ್ನು ಜೀವದಾನ ಎಂತಲೂ ಕರೆಯಲಾಗುತ್ತದೆ. ರಕ್ತದಾನದಿಂದ ಇನ್ನೊಂದು ಜೀವ ಉಳಿಯುವುದು ಮಾತ್ರವಲ್ಲ, ರಕ್ತದಾನ ಮಾಡುವವರಿಗೂ ಕೂಡ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ. 

ಸಾಮಾನ್ಯವಾಗಿ ವರ್ಷದಲ್ಲಿ ಒಂದು ಬಾರಿ ಆದರೂ ರಕ್ತದಾನ ಮಾಡುವುದರಿಂದ ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಲಾಗುತ್ತದೆ. ಕೆಲವು ಅಧ್ಯಯನಗಳ ಪ್ರಕಾರ, ರಕ್ತದಾನದಿಂದ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ರಕ್ತದಾನದಿಂದ ಏನೆಲ್ಲಾ ಪ್ರಯೋಜನ… 

ಕೆಲವು ಅಧ್ಯಯನಗಳ ಪ್ರಕಾರ,ರಕ್ತದಾನ ಮಾಡುವುದರಿಂದ ಒತ್ತಡ ಕಡಿಮೆ ಆಗುತ್ತದೆ ಎಂದು ಹೇಳಲಾಗುತ್ತದೆ. ಇದು ನಿಮ್ಮ ಮಾನಸಿಕ ಆರೋಗ್ಯಕ್ಕೂ ಕೂಡ ತುಂಬಾ ಪ್ರಯೋಜನಕಾರಿ ಆಗಿದೆ.  

ಅಧ್ಯಯನಗಳ ಪ್ರಕಾರ, ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ.  ರಕ್ತದಾನದಿಂದ ದೇಹದಲ್ಲಿನ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಶೇ. 80ರಷ್ಟು ಹೃದಯಾಘಾತ ಕಡಿಮೆ.

ರಕ್ತದಾನ ಮಾಡುವುದರಿಂದ ತೂಕ ನಿಯಂತ್ರಕ್ಕೂ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. 

ರಕ್ತದಲ್ಲಿ ಕಬ್ಬಿಣದ ಅಂಶ ಹೆಚ್ಚಾದಾಗ ಇದು ಬ್ಲಡ್ ಕ್ಯಾನ್ಸರ್ ಬೆಳವಣಿಗೆಯ ಅಪಾಯವನ್ನು ಹೆಚ್ಚಿಸುತ್ತದೆ. ಆದರೆ, ರಕ್ತದಾನ ಮಾಡುವುದರಿಂದ ರಕ್ತದಲ್ಲಿ ಕಬ್ಬಿಣದ ಶೇಖರಣೆಯನ್ನು ತಡೆಯಬಹುದು ಎಂದು ಹೇಳಲಾಗುತ್ತದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.    

Source : https://zeenews.india.com/kannada/photo-gallery/donating-blood-is-beneficial-not-only-for-physical-health-but-also-for-mental-health-140047

Views: 0

Leave a Reply

Your email address will not be published. Required fields are marked *