ಚಿತ್ರದುರ್ಗ ಸೆ. 29
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಮೂಲತಃ ಚಿತ್ರದುರ್ಗ ನಗರದ ವಾಸಿ ಬೆಂಗಳೂರಿನ ನಿವಾಸಿಯಾದ ಬಿ.ಎಂ. ವಾಗೋಜಿರಾವ್ (53) ಬೆಂಗಳೂರಿನ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ ಜಿಲ್ಲಾ ವಕ್ತಾರರಾದ ಬಿ.ಎಂ.ನಾಗರಾಜ್ ಬೇದ್ರೇಯವರ ಸಹೋದರರಾದ ಇವರು ಬೆಂಗಳೂರಿನಲ್ಲಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿನ ಮೂರು ದಿನದಿಂದ ಐಸಿಯುಲ್ಲಿ ದಾಖಲಾಗಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ.
ಮೃತರು ತಾಯಿ, ತಂಗಿ ತಮ್ಮಂದಿರು ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಬೆಂಗಳೂರಿನ ರುದ್ರಭೂಮಿಯಲ್ಲಿ ಸೆ. 30ರಂದು ನಡೆಯಲಿದೆ ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40