Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.
ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.
ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.
ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ
ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಟಿಕೆಟ್ ಬುಕ್ ಮಾಡುವ ವಿಧಾನ
- ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್ https://ttdevasthanams.ap.gov.inಗೆ ಭೇಟಿ ನೀಡಿ.
- ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್ ನಂಬರ್ ನೀಡಿ ಲಾಗಿನ್ ಆಗಿ.
- ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
- ಆಲ್‌ನೈಲ್ ಮೂಲಕ ಟಿಕೆಟ್ ಮೊತ್ತವನ್ನು ಪಾವತಿಸಿ.
- ನಿಮ್ಮ ಟಿಕೆಟ್ ಬುಕ್ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್ ಮೂಲಕ ನಿಮಗೆ ರವಾನೆಯಾಗುತ್ತದೆ.