Cancer In Women: ಮಹಿಳೆಯರಲ್ಲಿ ಕ್ಯಾನ್ಸರ್ ಅಪಾಯ ಕಡಿಮೆ ಮಾಡುತ್ತೆ ಈ ಅಭ್ಯಾಸಗಳು.

  • ಉತ್ತಮ ಆರೋಗ್ಯಕ್ಕೆ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ.
  • ಆರೋಗ್ಯ ತಜ್ಞರ ಪ್ರಕಾರ, ನಮ್ಮ ಜೀವನಶೈಲಿ, ಆಹಾರಪದ್ದತಿ ನಮ್ಮ ಆರೋಗ್ಯದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ.
  • ಮಹಿಳೆಯರು ಕೆಲವು ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಅವರಲ್ಲಿ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎನ್ನಲಾಗುತ್ತದೆ.

Cancer In Women: ವಿಶ್ವದಾದ್ಯಂತ ಪ್ರತಿ ವರ್ಷ ಕ್ಯಾನ್ಸರ್ ಹಲವು ಜನರನ್ನು ಬಳಿತೆಗೆದುಕೊಳ್ಳುತ್ತದೆ. ಅದರಲ್ಲೂ, ಪುರುಷರಿಗಿಂತ ಮಹಿಳೆಯರಲ್ಲಿ ಈ ಅಪಾಯ ಹೆಚ್ಚು ಎಂದು ಹೇಳಲಾಗುತ್ತಿದೆ. ಆದರೆ, ಅವರು ತಮ್ಮ ಜೀವನಶೈಲಿಯಲ್ಲಿ ಈ ಐದು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಮಹಿಳೆಯರಲ್ಲಿ ಕ್ಯಾನ್ಸರ್ ಅಪಾಯವನ್ನು ಬಹಳಷ್ಟು ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತಿದೆ. 

ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಮಹಿಳೆಯರಲ್ಲಿ ಕಡಿಮೆ ಆಗುತ್ತೆ ಕ್ಯಾನ್ಸರ್ ಅಪಾಯ: 
ಆರೋಗ್ಯಕರ ತೂಕ: 

ತೂಕ ಹೆಚ್ಚಾದಂತೆ ಸ್ಥೂಲಕಾಯತೆಯು ಸ್ತನ, ಅಂಡಾಶಯ, ಎಂಡೊಮೆಟ್ರಿಯಲ್ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ ಸೇರಿದಂತೆ ವಿವಿಧ ರೀತಿಯ ಕ್ಯಾನ್ಸರ್‌ನ ಅಪಾಯವನ್ನು ಹೆಚ್ಚಿಸುತ್ತದೆ. ಇದನ್ನು ತಪ್ಪಿಸಲು ಆರೋಗ್ಯಕರ ಆಹಾರವನ್ನು ಸೇವಿಸಿ, ನಿಯಮಿತ ದೈಹಿಕ ಚಟುವಟಿಕೆಗಳನ್ನು ರೂಢಿಸಿಕೊಳ್ಳುವ ಮೂಲಕ ತೂಕವನ್ನು ನಿಯಂತ್ರಿಸಿ. 

ಸಮತೋಲನ ಆಹಾರ: 
ಆರೋಗ್ಯ ತಜ್ಞರ ಪ್ರಕಾರ, ಸಮತೋಲನ ಆಹಾರವು ನಮ್ಮನ್ನು ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುತ್ತದೆ. ಮಾತ್ರವಲ್ಲ, ಇದು ಕ್ಯಾನ್ಸರ್ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. 

ದೈಹಿಕ ಚಟುವಟಿಕೆ: 
ನಿಯಮಿತ ದೈಹಿಕ ಚಟುವಟಿಕೆ, ವ್ಯಾಯಾಮವನ್ನು ರೂಢಿಸಿಕೊಳ್ಳುವುದರಿಂದ ಮಹಿಳೆಯರು ಸ್ತನ ಮತ್ತು ಕರುಳಿನ ಕ್ಯಾನ್ಸರ್ ನಂತಹ ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡಬಹುದು. ಆರೋಗ್ಯ ತಜ್ಞರ ಪ್ರಕಾರ, ಮಹಿಳೆಯರು ವಾರಕ್ಕೆ ಕನಿಷ್ಠ  150 ನಿಮಿಷಗಳ ಮಧ್ಯಮ-ತೀವ್ರತೆಯ ಏರೋಬಿಕ್ ಚಟುವಟಿಕೆ ಅಥವಾ 75 ನಿಮಿಷಗಳ ಹುರುಪಿನ-ತೀವ್ರತೆಯ ಏರೋಬಿಕ್ ಚಟುವಟಿಕೆ ರೂಢಿಸಿಕೊಳ್ಳುವುದು ಉತ್ತಮ. 

ತಂಬಾಕು ಸೇವನೆ ತಪ್ಪಿಸಿ: 
ಶ್ವಾಸಕೋಶ, ಸ್ತನ, ಗರ್ಭಕಂಠ ಮತ್ತು ಅಂಡಾಶಯದ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳಿಗೆ ಧೂಮಪಾನ ಪ್ರಮುಖ ಕಾರಣ. ಹಾಗಾಗಿ, ಎಲ್ಲಾ ಸ್ವರೂಪದ ತಂಬಾಕು ಸೇವನೆಯನ್ನು ತಪ್ಪಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ತಪ್ಪಿಸಬಹುದು ಎನ್ನಲಾಗುತ್ತದೆ

ತಂಬಾಕು ಸೇವನೆ ತಪ್ಪಿಸಿ: 
ಶ್ವಾಸಕೋಶ, ಸ್ತನ, ಗರ್ಭಕಂಠ ಮತ್ತು ಅಂಡಾಶಯದ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳಿಗೆ ಧೂಮಪಾನ ಪ್ರಮುಖ ಕಾರಣ. ಹಾಗಾಗಿ, ಎಲ್ಲಾ ಸ್ವರೂಪದ ತಂಬಾಕು ಸೇವನೆಯನ್ನು ತಪ್ಪಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ತಪ್ಪಿಸಬಹುದು ಎನ್ನಲಾಗುತ್ತದೆ. 

ಯಾವುದೇ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ: 
ಕೆಲವೊಮ್ಮೆ ನಾವು ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣಕ್ಕಾಗಿ ಆರೋಗ್ಯದ ಅಪಾಯಗಳು ಹೆಚ್ಚಾಗುತ್ತವೆ. ದೇಹ ಕಾಯಿಲೆಯ ಗೂಡಾಗುತ್ತದೆ. ಇದನ್ನು ತಪ್ಪಿಸಲು ನಿಮಗೆ ಯಾವುದೇ ರೀತಿಯ ಅನಾರೋಗ್ಯಗಳು ಕಂಡು ಬಂದರೂ ತಡಮಾಡದೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. 

Source : https://zeenews.india.com/kannada/health/adopt-these-five-habits-to-reduce-the-rist-of-cancer-in-women-199380

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *