CET : ಏಪ್ರಿಲ್ 18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದ್ದು, ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
- ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
- ಏಪ್ರಿಲ್ 18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ದೊರೆತಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

CET Application Submission Date Extension : ಏಪ್ರಿಲ್ 18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ದೊರೆತಿದೆ. ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಶುಲ್ಕ ಪಾವತಿಸಲು ಮಾರ್ಚ್ 21ರ ಸಂಜೆ 5.30ರವರೆಗೆ ಕಾಲಾವಕಾಶ ನೀಡಲಾಗಿದೆ.
ಇನ್ನೂ ಅರ್ಜಿ ಸಲ್ಲಿಸದೇ ಇರುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೊಂದು ಶುಭ ಸುದ್ದಿಯನ್ನು ನೀಡಿದ್ದು, CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಈಗಾಗಲೇ 3,75,399 ವಿದ್ಯಾರ್ಥಿಗಳು ಸಿಇಟಿಗೆ ನೋಂದಾಯಿಸಿಕೊಂಡಿದ್ದಾರೆ. 3,44,883 ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಇದು ಕಳೆದ ವರ್ಷಕ್ಕಿಂತ ಒಂದು ಲಕ್ಷ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಂತಾಗಿದೆ ಎಂದು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ .
ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಶುಲ್ಕ ಸಲ್ಲಿಸಲು ಮಾರ್ಚ್ 21ರ ಸಂಜೆ 5.30ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
C-TET ಅರ್ಹತಾ ಪರೀಕ್ಷೆಗೆ ನೋಂದಣಿ
ಅಖಿಲ ಭಾರತ ಮಟ್ಟದ ಶಿಕ್ಷಕರ ಸಾಮರ್ಥ್ಯ ಪರೀಕ್ಷೆಯಾದ C-TET ಎನ್ನುವುದು 1 ರಿಂದ 8 ನೇ ತರಗತಿಗಳಿಗೆ ಶಿಕ್ಷಕರ ನೇಮಕಾತಿಗಾಗಿ ಕೇಂದ್ರ ಸರ್ಕಾರವು ವಿನ್ಯಾಸಗೊಳಿಸಿದ ಅರ್ಹತಾ ಪರೀಕ್ಷೆಯಾಗಿದೆ. ಕೇಂದ್ರ ನವೋದಯ ವಿದ್ಯಾಲಯಗಳು ಸೇರಿದಂತೆ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳ ನಿಯಂತ್ರಣದಲ್ಲಿರುವ ಎಲ್ಲಾ ಶಾಲೆಗಳಲ್ಲಿ ನೇಮಕಾತಿಗಾಗಿ ಸಿ ಟಿಇಟಿ (CTET) ಅರ್ಹತೆ ಹೊಂದಿರಬೇಕು.
ಇದನ್ನು ವಿವಿಧ ರಾಜ್ಯಗಳ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಶಾಲೆಗಳಲ್ಲಿಯೂ ಬಳಸಬಹುದು. C-TET ಪರೀಕ್ಷೆಯನ್ನು ನೀವು ಎಷ್ಟು ಬಾರಿ ಬೇಕಾದರೂ ತೆಗೆದುಕೊಳ್ಳಬಹುದು ಮತ್ತು ನಿಮ್ಮ ಸ್ಕೋರ್ ಅನ್ನು ಸುಧಾರಿಸಲು ಮತ್ತೆ ಈ ಪರೀಕ್ಷೆ ಬರೆಯಬಹುದು.
C-TET ಅರ್ಹತಾ ಪರೀಕ್ಷೆಗೆ ನೋಂದಣಿಗೆ ಕೊನೆಯ ದಿನಾಂಕ ಏಪ್ರಿಲ್ 2 ಆಗಿದೆ. ಜುಲೈ 7 ರಂದು ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ. ಪತ್ರಿಕೆ ಎರಡು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಪತ್ರಿಕೆ ಒಂದು ಮಧ್ಯಾಹ್ನ 2 ರಿಂದ 4.30 ರವರೆಗೆ ನಡೆಯಲಿದೆ.
ಅಭ್ಯರ್ಥಿಗಳು ಮೊದಲು CTET ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು
ಹಂತ 1: CTET ಅಧಿಕೃತ ವೆಬ್‌ಸೈಟ್ https://ctet.nic.in ಗೆ ಲಾಗಿನ್ ಮಾಡಿ
ಹಂತ 2: “ಆನ್‌ಲೈನ್‌ನಲ್ಲಿ ಅಪ್ಲೈ ಮಾಡಲು” ಲಿಂಕ್‌ಗೆ ಹೋಗಿ ಮತ್ತು ಅದನ್ನು ಓಪನ್ ಮಾಡಿ
ಹಂತ 3: ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ನೋಂದಣಿ ಸಂಖ್ಯೆ/ಅರ್ಜಿ ಸಂಖ್ಯೆ ಸಲ್ಲಿಸಿ
ಹಂತ 4: ಇತ್ತೀಚಿನ ಸ್ಕ್ಯಾನ್ ಮಾಡಿದ ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ
ಹಂತ 5: ಡೆಬಿಟ್/ಕ್ರೆಡಿಟ್ ಕಾರ್ಡ್ ಮತ್ತು ನೆಟ್ ಬ್ಯಾಂಕಿಂಗ್ ಮೂಲಕ ಪರೀಕ್ಷಾ ಶುಲ್ಕವನ್ನು ಪಾವತಿಸಿ.
ಹಂತ 6: ದಾಖಲೆ ಮತ್ತು ಮುಂದಿನ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಮುದ್ರಿಸಿ.
ಮುಖಪುಟದಲ್ಲಿ ಒದಗಿಸಲಾದ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಕೇಳಲಾದ ವಿವರಗಳೊಂದಿಗೆ ನೋಂದಾಯಿಸಿ ಮತ್ತು ನೋಂದಣಿ ಸಂಖ್ಯೆಯನ್ನು ಉಳಿಸಿ. ನಂತರ, ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಪ್ರಿಂಟೌಟ್ ತೆಗೆದುಕೊಳ್ಳಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/Telegram: https://t.me/+E1ubNzdguQ5jN2Y1