ಚಿತ್ರದುರ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವುದರೊಂದಿಗೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಸಿಇಟಿ ಪರೀಕ್ಷಾ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಿಇಟಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣೆ ಕಾರ್ಯಗಳಿಗೆ ನಿಯೋಜನೆಗೊಂಡ ಅಧಿಕಾರಿಗಳನ್ನು ಹೊರತುಪಡಿಸಿ ಬೇರೆ ಅಧಿಕಾರಿಗಳನ್ನು ಪರೀಕ್ಷಾ ಕಾರ್ಯಗಳಿಗೆ ನೇಮಿಸಬೇಕು, ಬಿಸಿಲು ತೀವ್ರತರಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
ಚಿತ್ರದುರ್ಗ ನಗರದ 14 ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ, 6456 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.ಪರೀಕ್ಷಾ ಅವ್ಯವಹಾರಗಳನ್ನು ತಡೆಯುವ ದೃಷ್ಟಿಯಿಂದ ಪ್ರತಿ ಕೊಠಡಿಯೊಳಗೆ ಸಿ ಸಿ ಕ್ಯಾಮೆರಾ ಅಳವಡಿಸಬೇಕು ಎಂದು ಸೂಚಿಸಿದರು.
ಪಿಯು ಡಿಡಿ ಆರ್. ಪುಟ್ಟಸ್ವಾಮಿ ಮಾತನಾಡಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ಸಹ ನೇಮಿಸಲಾಗಿದೆ. ವಿಜ್ಞಾನ ವಿಷಯ ಶಿಕ್ಷಕರನ್ನು ಹೊರತುಪಡಿಸಿ ಬೇರೆ ವಿಷಯಗಳ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರಾಗಿ ನೇಮಿಸಲಾಗಿದೆ.
ಏ.18ರ ಬೆಳಿಗ್ಗೆ 10:30ರಿಂದ 11:50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ರವರೆಗೆ ಗಣಿತಶಾಸ್ತ್ರ ,ಏಪ್ರಿಲ್ 19 ರ ಬೆಳಿಗ್ಗೆ 10:30 ರಿಂದ11: 50 ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ರವರೆಗೆ ರಾಸಾಯನಶಾಸ್ತ್ರ ವಿಷಯ ಪರೀಕ್ಷೆಗಳು ನಡೆಯಲಿವೆ ಎಂದರು.
ಸಭೆಯಲ್ಲಿ ತಹಶೀಲ್ದಾರ್ ಡಾ. ನಾಗವೇಣಿ, ಬಿಓ ನಾಗಭೂಷಣ್, ಮಕ್ಕಳ ರಕ್ಷಣಾಧಿಕಾರಿ ಸವಿತಾ ಸೇರಿದಂತೆ ನಾನಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ನಾನಾ ಇಲಾಖೆ ಅಧಿಕಾರಿಗಳು ಇದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1