Champions Trophy 2025: ಭಾರತದ ಸೆಮೀಸ್ ಎದುರಾಳಿ ಯಾರು? ಯಾವಾಗ ನಡೆಯಲಿದೆ ಈ ಪಂದ್ಯ?

Champions Trophy 2025 Semifinals: 2025ರ ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದ ಪಂದ್ಯಗಳು ಕೊನೆಗೊಂಡಿವೆ. ಭಾರತ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಮಿಫೈನಲ್‌ಗೆ ತಲುಪಿವೆ. ಭಾರತ ಆಸ್ಟ್ರೇಲಿಯಾವನ್ನು ಮತ್ತು ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಸೆಮಿಫೈನಲ್ ಪಂದ್ಯಗಳು ಮಾರ್ಚ್ 4 ಮತ್ತು 5 ರಂದು ನಡೆಯಲಿವೆ.

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಗುಂಪು ಹಂತದ ಪಂದ್ಯಗಳು ಕೊನೆಗೊಂಡಿವೆ. ಕೊನೆಯ ಗುಂಪು ಹಂತದ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ 44 ರನ್‌ಗಳಿಂದ ಜಯಗಳಿಸಿತು. ಇದರೊಂದಿಗೆ ಸೆಮಿಫೈನಲ್ ಪಂದ್ಯಗಳು ಸಹ ನಿರ್ಧಾರವಾಗಿವೆ. ಈ ಬಾರಿ ಭಾರತ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಮಿಫೈನಲ್‌ನಲ್ಲಿ ಸ್ಥಾನ ಪಡೆದಿವೆ. ಈ ಎರಡೂ ಸೆಮಿಫೈನಲ್ ಪಂದ್ಯಗಳು ಮಾರ್ಚ್ 4 ಮತ್ತು 5 ರಂದು ನಡೆಯಲಿವೆ. ಟೀಮ್ ಇಂಡಿಯಾ ತನ್ನ ಪಂದ್ಯವನ್ನು ದುಬೈನಲ್ಲಿ ಆಡಿದರೆ, ಎರಡನೇ ಸೆಮಿಫೈನಲ್ ಪಂದ್ಯ ಪಾಕಿಸ್ತಾನದಲ್ಲಿ ನಡೆಯಲಿದೆ.

ವಾಸ್ತವವಾಗಿ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಗುಂಪು ಪಂದ್ಯದ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿದ್ದವು. ಏಕೆಂದರೆ ಸೆಮಿಫೈನಲ್‌ಗೆ ನಾಲ್ಕು ತಂಡಗಳನ್ನು ಈಗಾಗಲೇ ನಿರ್ಧರಿಸಲಾಗಿತ್ತು. ಆದರೆ ಯಾವ ತಂಡ ಯಾರ ವಿರುದ್ಧ ಆಡುತ್ತದೆ ಎಂಬುದು ಖಚಿತವಾಗಿರಲಿಲ್ಲ. ಆದರೀಗ ಅದರ ಸಂಪೂರ್ಣ ಚಿತ್ರಣ ಹೊರಬಿದ್ದಿದೆ. ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದಿರುವ ಟೀಂ ಇಂಡಿಯಾ, ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಹಾಗೆಯೇ ಎ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ನ್ಯೂಜಿಲೆಂಡ್, ಬಿ ಗುಂಪಿನಲ್ಲಿ ಮೊದಲ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಯಾವಾಗ ನಡೆಯಲ್ಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಮಾರ್ಚ್​ 4 ರ ಮಂಗಳವಾರದಂದು ನಡೆಯಲ್ಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಎಲ್ಲಿ ನಡೆಯಲ್ಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ದುಬೈನ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಪಂದ್ಯದ ಟಾಸ್ 2 ಗಂಟೆಗೆ ನಡೆಯಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಆಡಮ್ ಝಂಪಾ.

Source: https://tv9kannada.com/sports/cricket-news/india-australia-champions-trophy-semifinal-live-streaming-psr-985764.html

Leave a Reply

Your email address will not be published. Required fields are marked *