ಸ್ಯಾಂಡಲ್ವುಡ್ ಪ್ರಚಂಡ ಕುಳ್ಳ ದ್ವಾರಕೀಶ್ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ ಲೆಜೆಂಡ್ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಚಿತ್ರರಂಗದ (Kannada Actor) ಲೆಜೆಂಡ್ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಕನ್ನಡ ಚಿತ್ರರಂಗವನ್ನು ಬಿಟ್ಟು ಹೋಗಿದ್ದಾರೆ. ಹೃದಯಾಘಾತದಿಂದ (Heart Attack) ದ್ವಾರಕೀಶ್ ಅಸುನೀಗಿದ್ದಾರೆ ಅಂತ ಹೇಳಲಾಗ್ತಿದೆ. ಕನ್ನಡ ಹಾಗೂ ತಮಿಳು ಚಿತ್ರಗಳಿಗೆ ಬಂಡವಾಳ ಹೂಡಿದ್ದಾರೆ ಕರ್ನಾಟಕದ ಕುಳ್ಳ ದ್ವಾರಕೀಶ್. ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ದ್ವಾರಕೀಶ್‌ನ ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಮೊನ್ನೆಯಷ್ಟೇ ಮತ್ತೊಬ್ಬ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್ ಮಾಡಿಕೊಂಡಿದ್ದರು.
1963ರಲ್ಲಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ!
1963ರಲ್ಲಿ ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಪಾದಾರ್ಪಣೆ ಮಾಡಿದರು. ಹಲವಾರು ಸೂಪರ್ ಹಿಟ್ ಸಿನಿಮಾಗಳಿಗೆ ಬಂಡವಾಳ ಹಾಕುವುದರ ಜೊತೆಗೆ ನಟಿಸಿ ಸೈ ಎನಿಸಿಕೊಂಡಿದ್ದರು. ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ. ಇನ್ನೂ ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. 1966ರಲ್ಲಿ ಮೇಯರ್ ಮುತ್ತಣ್ಣ ಸಿನಿಮಾ ನಿರ್ದೇಶನ ಕೂಡ ಮಾಡಿದ್ದರು.
81 ವರ್ಷ ವಯಸ್ಸಾಗಿದ್ದ ದ್ವಾರಕೀಶ್ ಅವರಿಗೆ ಹೃದಯಾಘಾತವಾಗಿದೆ ಅಂತ ಹೇಳಲಾಗ್ತಿದೆ. ಎಲೆಕ್ಟ್ರಾನಿಕ್ ಸಿಟಿಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗ್ತಿದೆ. ಡಾ ರಾಜ್‌ಕುಮಾರ್, ಅಂಬರೀಶ್, ವಿಷ್ಣುವರ್ಧನ್ ರಂತಹ ಮೇರು ನಟರ ಜೊತೆ ದ್ವಾರಕೀಶ್ ನಟಿಸಿದ್ದಾರೆ. ದ್ವಾರಕೀಶ್ ಕೊನೆಯದಾಗಿ ಚೌಕ ಸಿನಿಮಾದಲ್ಲಿ ನಟಿಸಿದ್ದರು.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನನ!
ನಟ ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ರು. ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿದ್ದ ದ್ವಾರಕೀಶ್ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ರು. ಬಳಿಕ ಇಟ್ಟಿಗೆ ವ್ಯಾಪಾರ ಕಾರ್ಖಾನೆ ಕೂಡ ಶುರು ಮಾಡಿದ್ರು. ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ದ್ವಾರಕೀಶ್ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದ್ರು.
ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1