ಸರಳತೆ ಮತ್ತು ಕುಟುಂಬ ಮೌಲ್ಯಗಳ ಪ್ರತಿರೂಪ ಚನ್ನಮ್ಮ ದೇವೇಗೌಡ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ.

ಚಿತ್ರದುರ್ಗ:

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಸಂತಾಪ ಸೂಚಿಸಿದ್ದಾರೆ.

“ಶ್ರೀಮತಿ ಚೆನ್ನಮ್ಮ ಅವರು ಸರಳತೆ, ಸೌಜನ್ಯ ಮತ್ತು ಕುಟುಂಬ ಮೌಲ್ಯಗಳಿಗೆ ಬದ್ಧತೆಯಿಂದ ಬದುಕಿದ ಮಹನೀಯರು”. ತಮ್ಮ ಕುಟುಂಬದ ಬೆನ್ನೆಲುಬಾಗಿ ನಿಂತು ಹೆಚ್.ಡಿ. ದೇವೇಗೌಡ ಅವರ ಸಾರ್ವಜನಿಕ ಹಾಗೂ ರಾಜಕೀಯ ಜೀವನಕ್ಕೆ ಮೌನ ಶಕ್ತಿಯಾಗಿ ಅಪಾರ ಬೆಂಬಲ ನೀಡಿದವರು. “ಭಗವಂತನು ಶ್ರೀಮತಿ ಚೆನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ಹಾಗೂ ಸದ್ಗತಿಯನ್ನು ಕರುಣಿಸಲಿ. ಈ ದುಃಖವನ್ನು ಭರಿಸುವ ಶಕ್ತಿ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ದೇವೇಗೌಡ ಕುಟುಂಬದೊಂದಿಗೆ ನಾನೂ ಸಹ ಭಾಗಿಯಾಗಿದ್ದು, ನನ್ನ ಹೃತ್ಪೂರ್ವಕ ಸಂತಾಪವನ್ನು ಸಲ್ಲಿಸುತ್ತೇನೆ” ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *