ಚಿಯಾ ಬೀಜಗಳ (Chia Seeds) ಪ್ರಯೋಜನಗಳ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಅನೇಕರು ಇದನ್ನು ನಾನಾ ರೀತಿಯಲ್ಲಿ ಬಳಕೆ ಮಾಡುತ್ತಾರೆ. ಅದರಲ್ಲಿಯೂ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಇಂತಹ ಬೀಜಗಳ ಸೇವನೆ ಮಾಡುವುದರಿಂದ ಆರೋಗ್ಯ (Health) ಚೆನ್ನಾಗಿರುತ್ತದೆ ಮಾತ್ರವಲ್ಲ.
ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿ ಅಥವಾ ಹಣ್ಣಿನ ಜ್ಯೂಸ್ ಗಳಿಗೆ ಬೆರೆಸಿ ಪ್ರತಿದಿನ ಸೇವಿಸುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಚಿಯಾ ಬೀಜಗಳು ಪೋಷಕಾಂಶಗಳು, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿರುವುದರಿಂದ ಸಮತೋಲಿತ ಆಹಾರ ಸೇವನೆ ಮಾಡುವವರು ಇವನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಮಾತ್ರವಲ್ಲ ಇದರ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ರೀತಿಯಲ್ಲಿ ಪ್ರಯೋಜನಗಳು ಸಿಗುತ್ತವೆ. ಹಾಗಾದ್ರೆ ಇದು ಯಾರಿಗೆ ಒಳ್ಳೆಯದು? ಯಾಕೆ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಕರುಳಿನ ಆರೋಗ್ಯಕ್ಕೆ ಒಳ್ಳೆಯದು
ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಈ ಸಣ್ಣ ಚಿಯಾ ಬೀಜಗಳು ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತವೆ. ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ. ಮಾತ್ರವಲ್ಲ ಚಿಯಾ ಬೀಜಗಳನ್ನು ನೆನೆಸಿದ ನೀರನ್ನು ಕುಡಿಯುವುದರಿಂದ ಕರುಳನ್ನು ಸ್ವಚ್ಛಗೊಳಿಸಬಹುದು. ಹಾಗಾಗಿ ನಿಮ್ಮ ಕರುಳು ಆರೋಗ್ಯವಾಗಿರಬೇಕು ಎಂದರೆ ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಸಣ್ಣ ಬೀಜಗಳನ್ನು ತಪ್ಪದೆ ಸೇವನೆ ಮಾಡಬೇಕು.
ತೂಕ ಕಡಿಮೆ ಮಾಡಿಕೊಳ್ಳಲು ಸಹಕಾರಿ
ಪ್ರತಿನಿತ್ಯ ಚಿಯಾ ಬೀಜಗಳನ್ನು ತಿನ್ನುವುದರಿಂದ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದು ಅತಿಯಾದ ಹಸಿವು ಅಥವಾ ಬಾಯಾರಿಕೆ ಆಗುವುದನ್ನು ಕಡಿಮೆ ಮಾಡುತ್ತದೆ. ಇದರಿಂದ ಅತಿಯಾಗಿ ತಿನ್ನುವ ಅಭ್ಯಾಸವನ್ನು ಕೂಡ ತಡೆಯಬಹುದು. ಮಾತ್ರವಲ್ಲ ಇದರಿಂದ ನಿಮ್ಮ ತೂಕವನ್ನು ಆರೋಗ್ಯಕರವಾಗಿ ಕಡಿಮೆ ಮಾಡಿಕೊಳ್ಳಬಹುದು. ನೀವು ಇವುಗಳನ್ನು ಮಿಲ್ಕ್‌ಶೇಕ್ ಗಳಲ್ಲಿಯೂ ಸೇರಿಸಿ ಕುಡಿಯಬಹುದು. ಇದರಲ್ಲಿ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಸುಲಭವಾಗಿ ಸಿಗುವುದರಿಂದ ಇದನ್ನು ಯಾವುದೇ ರೀತಿಯ ಭಯವಿಲ್ಲದೆ ಸೇವನೆ ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿ
ಚಿಯಾ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಹಾಗಾಗಿ ಫೈಬರ್ ಅನ್ನು ಸಹ ಒದಗಿಸುತ್ತವೆ. ಅವುಗಳನ್ನು ನಿಯಮಿತವಾಗಿ ಸೇವನೆ ಮಾಡಿದರೆ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿಕೊಳ್ಳಬಹುದು. ಮಾತ್ರವಲ್ಲ ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುವುದಕ್ಕೆ ಸಹಕಾರಿಯಾಗಿದೆ. ಜೊತೆಗೆ ಇದು ಹೃದಯದ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಈ ಬೀಜದಲ್ಲಿ ಕ್ಯಾಲ್ಸಿಯಂ, ರಂಜಕ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದ್ದು ಮೂಳೆಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.
ಯಾರಿಗೆ ಒಳ್ಳೆಯದಲ್ಲ?
ಪ್ರತಿದಿನ ಚಿಯಾ ಬೀಜಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಮತ್ತು ಅದರಿಂದ ಯಾವುದೇ ಸಮಸ್ಯೆಗಳಿಲ್ಲ. ಚಿಯಾ ಬೀಜಗಳನ್ನು ನೇರವಾಗಿ ಸೇವಿಸುವ ಬದಲು ನೀರು ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು. ದಿನಕ್ಕೆ 2- 3 ಚಮಚ ಚಿಯಾ ಬೀಜಗಳನ್ನು ಬಳಸುವುದು ಉತ್ತಮ. ಆದರೆ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅದೇ ರೀತಿ, ಹೆಚ್ಚು ಚಿಯಾ ಬೀಜಗಳನ್ನು ಸೇವಿಸುವುದರಿಂದ ಮಲಬದ್ಧತೆಯ ಸಮಸ್ಯೆ ಉಂಟಾಗುತ್ತದೆ. ಕಡಿಮೆ ರಕ್ತದೊತ್ತಡ ಇರುವವರು ಇದನ್ನು ಸೇವಿಸದಿರುವುದು ಉತ್ತಮ.
Views: 17