
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಫೆ. 19 : ಬೆಳಗಾಂನಲ್ಲಿ ನಡೆದ ಚಿತ್ರಕಲಾ ಪ್ರದರ್ಶನದಲ್ಲಿ ಶಾಂತಕುಮಾರ್ ಜವಳಿ ರವರು ರಚನೆ ಮಾಡಿದ ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಜನಾಂಗಕ್ಕೆ ಸೇರಿದ ಕಾಡುಗೊಲ್ಲರ ಭಾವಚಿತ್ರಕ್ಕೆ ರಾಜ್ಯ ಪ್ರಶಸ್ತಿ ಬಂದಿರುತ್ತದೆ. ಚಿತ್ರದುರ್ಗದಲ್ಲಿ ತೋಟಗಾರಿಕೆ ಇಲಾಖೆವತಿಯಿಂದ ನಡೆದ 32ನೇ ಫಲಪುಷ್ಪ ಪ್ರದರ್ಶನದಲ್ಲಿ ಈ ಚಿತ್ರವನ್ನು ಪ್ರದರ್ಶನ ಮಾಡಿದ್ದು ಇದನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿತ್ರಕಲಾವಿದರಾದ ನಾಗರಾಜ್ ಬೇದ್ರೇ, ಕಾಡು ಗೋಲ್ಲ ಸಮುದಾಯ ಮುಖಂಡರಾದ ವೆಂಕಟೇಶ್ ಯಾದವ್ ಭಾಗವಹಿಸಿ ವಿಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
Views: 0