ಚಿತ್ರದುರ್ಗ ಅನುದಾನಿತ ಪಿಯು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ: ಪಿ.ಎಂ.ಜಿ. ರಾಜೇಶ್ ಅಧ್ಯಕ್ಷ

ಚಿತ್ರದುರ್ಗ ನ. 30

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ.ಜಿ. ರಾಜೇಶ್‍ರವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷರಾದ ಡಾ.ಎನ್.ಹರೀಶ್ ತಿಳಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಶನಿವಾರ ಸಂಜೆ ಬಾಲಕರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಜ್ಯ ಅಧ್ಯಕ್ಷರಾದ ಡಾ.ಎನ್.ಹರೀಶ್ ನೇತೃತ್ವದಲ್ಲಿ ಸಭೆಯನ್ನು ನಡೆಸಿದ ಜಿಲ್ಲೆಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರು ಜಿಲ್ಲಾ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಗೌರವಾಧ್ಯಕ್ಷರಾಗಿ ಜಿ.ಎಸ್. ತಿಪ್ಪೇಸ್ವಾಮಿ, ಕಾರ್ಯಧ್ಯಕ್ಷರಾಗಿ ಬಿ.ಆರ್.ತಿಪ್ಪಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಡಾ.ತಿಮ್ಮಣ್ಣ, ಕಾರ್ಯ ದರ್ಶಿಯಾಗಿ ಜಗದೀಶ್, ಸಂಘಟನಾ ಕಾರ್ಯದರ್ಶಿಯಾಗಿ ಯೋಗೀಶ್ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *