ಚಿತ್ರದುರ್ಗದ ಆಕಾಶ್ ಟಿ. ಅವರಿಗೆ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಾಕ್ಟರೇಟ್ ಪದವಿ.

ರಸ್ತೆ ನಿರ್ಮಾಣ ತಂತ್ರಜ್ಞಾನದ ಕುರಿತು ಸಂಶೋಧನೆ – ಪುಸ್ತಕ ಹಾಗೂ ಸಂಶೋಧನಾ ಪ್ರಬಂಧಗಳ ಪ್ರಕಟಣೆಯಲ್ಲೂ ಸಾಧನೆ

ಚಿತ್ರದುರ್ಗ:

ನಗರದ ಯುವ ಉದ್ಯಮಿ ಹಾಗೂ ಸಿವಿಲ್ ಇಂಜಿನಿಯರ್ ಆಕಾಶ್ ಟಿ. ಅವರು ರಾಜಸ್ಥಾನದ ಅಲ್ವಾರ್‌ನಲ್ಲಿರುವ ಸನ್‌ರೈಸ್ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (Ph.D.) ಪದವಿ ಪಡೆದು ಸಾಧನೆ ಮಾಡಿದ್ದಾರೆ.

ರಸ್ತೆ ನಿರ್ಮಾಣ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಹಾಗೂ ನಿರ್ಮಾಣ ವಿಧಾನಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ “An Examining Analysis of the Linear Construction Method for Roadwork’s” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಅವರು ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ.

ಆಕಾಶ್ ಟಿ. ಅವರು ವೃತ್ತಿಯಲ್ಲಿ ಕ್ಲಾಸ್-1 ಸಿವಿಲ್ ಕಾಂಟ್ರಾಕ್ಟರ್ ಹಾಗೂ ಸೂಪರ್ ಗ್ರೇಡ್ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, AKASH GROUP OF CONSTRUCTIONS ಸಂಸ್ಥೆಯ ಪ್ರೊಪ್ರೈಟರ್ ಆಗಿದ್ದು, ಸಿವಿಲ್ ನಿರ್ಮಾಣ ಹಾಗೂ ವಿದ್ಯುತ್ ಕಾಮಗಾರಿಗಳ ಕ್ಷೇತ್ರದಲ್ಲಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.

ವೃತ್ತಿಪರ ಜವಾಬ್ದಾರಿಗಳ ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಆಸಕ್ತಿ ಹೊಂದಿರುವ ಅವರು ಸಂಶೋಧನೆಗೆ ವಿಶೇಷ ಆದ್ಯತೆ ನೀಡಿದ್ದಾರೆ. ತಮ್ಮ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದಂತೆ ಪುಸ್ತಕಗಳನ್ನು ಪ್ರಕಟಿಸುವುದರೊಂದಿಗೆ ವಿವಿಧ ಸಂಶೋಧನಾ ಪ್ರಬಂಧಗಳನ್ನೂ ಪ್ರಕಟಿಸಿ ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ.

2025ರಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಅಕಾಶ್ ಟಿ. ಅವರಿಗೆ 2026ರಲ್ಲಿ ಸನ್‌ರೈಸ್ ವಿಶ್ವವಿದ್ಯಾಲಯವು ಅಧಿಕೃತವಾಗಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

ಉದ್ಯಮ ಮತ್ತು ವೃತ್ತಿಜೀವನದ ಜವಾಬ್ದಾರಿಗಳ ನಡುವೆಯೂ ಉನ್ನತ ಶಿಕ್ಷಣ ಹಾಗೂ ಸಂಶೋಧನೆಯಲ್ಲಿ ತೊಡಗಿಸಿಕೊಂಡು ಡಾಕ್ಟರೇಟ್ ಪದವಿ ಗಳಿಸಿರುವುದು ಅವರ ಪರಿಶ್ರಮ, ಆತ್ಮವಿಶ್ವಾಸ, ಛಲ ಮತ್ತು ಸಾಧಿಸುವ ಹಂಬಲಕ್ಕೆ ಸಾಕ್ಷಿಯಾಗಿದೆ.

ಆಕಾಶ್ ಟಿ. ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬದ ಸದಸ್ಯರು, ಸ್ನೇಹಿತರು, ಉದ್ಯಮ ಕ್ಷೇತ್ರದ ಸಹೋದ್ಯೋಗಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿಯೂ ಅವರು ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *