ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ: 47 ನೇ ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಮಾಜಿ ಶಾಸಕರಾದ ಜಿ.ಎಚ್ ತಿಪ್ಪಾರೆಡ್ಡಿ ರವರ ನಿವಾಸದಲ್ಲಿ ಬಿಜೆಪಿ ಪಕ್ಷದ ಧ್ವಜಾರೋಹಣ ನಡೆಸಿ ಸಿಹಿ ಹಂಚುವುದರ ಮುಖಾಂತರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ ಕುಮಾರಸ್ವಾಮಿರವರು ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

