ಚಿತ್ರದುರ್ಗ ಜು. 07
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಭಾರತೀಯ ಜನತಾ ಪಾರ್ಟಿ, ಚಿತ್ರದುರ್ಗ ಜಿಲ್ಲೆ ಘಟಕದವತಿಯಿಂದ ಜು.8ರ ಬುಧವಾರ ಬೆಳ್ಳಿಗ್ಗೆ 10 ಗಂಟೆಗೆ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿ ಜಿ ಸಮುದಾಯ ಭವನದಲ್ಲಿಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಪೂರ್ವ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ ತಿಳಿಸಿದ್ದಾರೆ.
ಈ ಸಭೆಗೆ ಕರ್ನಾಟಕ ರಾಜ್ಯ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ, ಸಂಸದ ರಾದ ಗೋವಿಂದ ಕಾರಜೋಳ, ಶಾಸಕರಾದ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದ ಗೌಡ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ತಿಪ್ಪೇಸ್ವಾಮಿ ನೇರ್ಲಗುಂಟೆ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಿವಯೋಗಿ ಸ್ವಾಮಿ, ವೈ.ಎ ನಾರಾಯಣಸ್ವಾಮಿ, ಜಿಲ್ಲಾ ಆಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಮುಖಂಡರುಗಳಾದ ಲಿಂಗಮೂರ್ತಿ, ಎನ್.ಆರ್.ಲಕ್ಷ್ಮೀಕಾಂತ, ರಾಜಣ್ಣ, ಅನಿಲ್ ವಿಭಾಗ ಪ್ರಬಾರಿ ಮೇಘರಾಜ್, ವಿಭಾಗ ಸಹಾ ಪ್ರಭಾರಿ ಎ.ಮುರಳಿ, ಆಗ್ನೇಯ ಚುನಾವಣಾ ಸಹಾ ಪ್ರಭಾರಿ ರಘುಚಂದನ್, ಪಕ್ಷದ ಆಗ್ನೇಯ ಪದವೀಧರ ಕ್ಷೇತ್ರ ಅಭ್ಯರ್ಥಿ ಕೆ.ಎಂ.ಸುರೇಶ್ ಸೇರಿದಂತೆ ಭಾರತೀಯ ಜನತಾ ಪಾರ್ಟಿಯ ಹಾಲಿ ಮತ್ತು ಮಾಜಿ ಚುನಾಯಿತ ಜನಪ್ರತಿನಿದಿಗಳು, ಜಿಲ್ಲೆಯ ಎಲ್ಲಾ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾ ಅಧ್ಯಕ್ಷರು ಸೇರಿದಂತೆ ಸರ್ವ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j