ಚಿತ್ರದುರ್ಗ ಏ. 10
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸಿದ್ದಾರೆ 21 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 116 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 66 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.



ಅಜೇಯ ಎಸ್. ವಾಣಿಜ್ಯ ಶಾಸ್ತ್ರದಲ್ಲಿ 600 ಅಂಕಗಳಿಗೆ 572 ಸಂದೀಪ್ ಆರ್. ವಿಜ್ಞಾನ ವಿಭಾಗದಲ್ಲಿ 600ಕ್ಕೆ 558 ರಾಮಾಂಜನೇಯ ವಿ. ಕಲಾ ವಿಭಾಗದಲ್ಲಿ 600ಕ್ಕೆ 551 ಅಂಕಗಳನ್ನು ಪಡೆದಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಶಾಸಕರು ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಸದಸ್ಯರು ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.