ಚಿತ್ರದುರ್ಗ ಅ. 25
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ದೇಶದ ಜನರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಮರುಪಡೆಯುವವರೆಗೆ ಮತ್ತು ದೇಶದ ಹದಿಮೂರು ಕೋಟಿ ಮತದಾರರಿಗೆ ನ್ಯಾಯ ದೊರಕುವವರೆಗೆ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಎಲ್ಲರೊಂದಿಗೆ ಸೇರಿ ಹೋರಾಟವನ್ನು ಮುಂದುವರಿಸಲಿದೆ ಎಂದು ಓಟ್ ಬಚಾವ್-ದೇಶ್ ಬಚಾವ್ ಅಭಿಯಾನದ ಎಐಸಿಸಿಯಿಂದ ನೇಮಕವಾಗಿರುವ
ಕರ್ನಾಟಕ ಉಸ್ತುವಾರಿ ವೀಕ್ಷಕರಾಗಿರುವ ಶ್ರೀಮತಿ ದೀಪ್ತಿ ಮೇರಿ ವರ್ಗೀಸ್ರವರು ತಿಳಿಸಿದರು.
ಚಿತ್ರದುರ್ಗ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಓಟ್ ಬಚಾವ್-ದೇಶ್ ಬಚಾವ್ ಅಭಿಯಾನದಡಿಯಲ್ಲಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶದಲ್ಲಿ ಜನರಿಗೆ ನೀಡಲಾಗಿರುವ ಮೂಲಭೂತ ಮತದಾನದ ಹಕ್ಕನ್ನು ಕಡೆಗಣಿಸಲಾಗುತ್ತಿದ್ದು, ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲಾಗುತ್ತಿದೆ. ಸಂವಿಧಾನಬದ್ಧವಾಗಿ ಜನರಿಗೆ ದೊರೆತಿರುವ ಮತದಾನದ ಹಕ್ಕನ್ನು ಪ್ರಸ್ತುತ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಬೆಂಬಲದೊಂದಿಗೆ ಮೊಟಕುಗೊಳಿಸಲಾಗುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿರ್ಧಾರಗಳು ಯಾವುದೇ ಚರ್ಚೆಯಿಲ್ಲದೆ ಏಕಪಕ್ಷೀಯವಾಗಿ ಜಾರಿಯಾಗುತ್ತಿವೆ ಜೊತೆಗೆ, ಇತರ ಇಬ್ಬರು ಚುನಾವಣಾ ಆಯುಕ್ತರು ಕೂಡ ಮುಖ್ಯ ಚುನಾವಣಾ ಆಯುಕ್ತರ ನಿರ್ಧಾರಗಳ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಅಸಮ್ಮತಿ ಸೂಚಿಸಿದ್ದಾರೆ ಅದರು ಸಹಾ ಅದನ್ನು ಪರಿಗಣಿಸದೇ ತನ್ನ ನಿರ್ಧಾರವನ್ನು ಹೇರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಲಕ್ಷಾಂತರ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಇದಕ್ಕೆ ಕೇಂದ್ರ ಸರ್ಕಾರದ ಪ್ರಮುಖರು ಬೆಂಬಲ ನೀಡುತ್ತಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರ ಕಾರ್ಯವೈಖರಿಯನ್ನು ವಿರೋಧಿಸಿ ದೆಹಲಿ ಸೇರಿದಂತೆ ವಿವಿಧಡೆ ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿ ಈಗಾಗಲೇ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ನವರಾತ್ರಿ ಹಬ್ಬದ ಮುನ್ನ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನ ದಲ್ಲಿಟ್ಟುಕೊಂಡು ಸ್ವಲ್ಪ ವಿರಾಮ ನೀಡಲಾಗಿತ್ತೇ ವಿನಃ ಹೋರಾಟ ನಿಂತಿಲ್ಲ ಎಂದು ಸ್ಪಷ್ಟಪಡಿಸಿದರು.


ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಮುಖ್ಯ ಚುನಾವಣಾ ಆಯುಕ್ತರ ಕಾರ್ಯವೈಖರಿಯನ್ನು ಖಂಡಿಸಿ, ಮತದಾರರ ಹಕ್ಕುಗಳನ್ನು ರಕ್ಷಿಸಲು ಜಿಲ್ಲಾ, ಬ್ಲಾಕ್ ಹಾಗೂ ರಾಜ್ಯ ಮಟ್ಟದಲ್ಲಿ ಬೃಹತ್ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವೀಕ್ಷಕರಾಗಿ ಜಿಲ್ಲಾ, ಬ್ಲಾಕ್ ಮತ್ತು ರಾಜ್ಯ ಮಟ್ಟದಲ್ಲಿ ಹೋರಾಟಗಳನ್ನು ಮುಂದುವರಿಸಲು ಹಾಗೂ ದೆಹಲಿಯಲ್ಲಿ ಬೃಹತ್ ಮಹಾರ್ಯಾಲಿ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿ ಇದರಲ್ಲಿ ಸ್ಥಳೀಯ ಶಾಸಕರು, ಹಿರಿಯ ನಾಯಕರು, ಜಿಲ್ಲಾ ಅಧ್ಯಕ್ಷರು ಮತ್ತು ಮಹಿಳಾ ಕಾಂಗ್ರೆಸ್ ಹಾಗೂ ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದರು.
ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ನಿಖಿತರಾಜ್ ಮೌರ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಕೆ.ತಾಜ್ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ದ್ರಾಕ್ಷರಸ ಮಂಡಳಿ ಅಧ್ಯಕ್ಷರಾದ ಯೋಗಿಶ್ ಬಾಬು, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ
ರಘು, ಲಿಡ್ಕರ್ ಮಾಜಿ ಅಧ್ಯಕ್ಷ ಓಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಉಲ್ಲಾಸ್ ಕಾರೇಹಳ್ಳಿ, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ, ಮಾಜಿ ಶಾಸಕ ಉಮಾಪತಿ, ಎಸ್.ಟಿ.ಅಧ್ಯಕ್ಷ ಮಂಜುನಾಥ್, ಮುದಾಸಿರ್ ನವಾಜ್, ಖುದ್ದುಸ್, ಪ್ರಕಾಶ್ ನಾಯ್ಕ್, ಅಂಜನಪ್ಪ, ದೇವರಾಜ್, ರವಿಕುಮಾರ್, ಮಧುಗೌಡ, ಆಜಾಮ್,ಓಬಿಸಿ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಗೀತಾ
ನಂದಿನಿಗೌಢ, ಡಿಸಿಸಿ ಉಪಾಧ್ಯಕ್ಷ ನಜ್ಮಾತಾಜ್, ಗುರುರಾಜ ಶಟ್ಟಿ, ಶಂಶಾಕ ಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು