ಚಿತ್ರದುರ್ಗ, ಜ.31:
ಫೆಬ್ರವರಿ 1ರಂದು ಭಾನುವಾರ ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳ ನೋಂದಣಿಗಾಗಿ ನೀಡಲಾಗಿದ್ದ ಕ್ಯೂಆರ್ ಕೋಡ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ಹೊಸ ಕ್ಯೂಆರ್ ಕೋಡ್ ಅನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಆಡಳಿತ ಪ್ರಕಟಣೆ ತಿಳಿಸಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಅಧಿಕೃತ ವೆಬ್ಸೈಟ್ ಮೂಲಕ ಅಥವಾ ಗೂಗಲ್ ಫಾರಂ ಲಿಂಕ್ ಬಳಸಿಕೊಂಡು ನೋಂದಣಿ ಮಾಡಿಕೊಳ್ಳಬಹುದು. ಹೊಸ ಕ್ಯೂಆರ್ ಕೋಡ್ ಬಳಸಿ ಸಹ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಕಾಶವನ್ನು ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ಜಿಲ್ಲಾ ಅಧಿಕೃತ ವೆಬ್ ಸೈಟ್ https://chitradurga.nic.in/en/ ಮೂಲಕ ಗೂಗಲ್ ಫಾರಂ ಲಿಂಕ್ https://forms.gle/hHQmNYk4uBRSV9FeA ಅಥವಾ ಹೊಸ ಕ್ಯೂ ಆರ್ ಕೋಡ್ ಬಳಸಿ ನೊಂದಣಿ ಮಾಡಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಉದ್ಯೋಗ ಮೇಳದ ವಿವರ
ಫೆಬ್ರವರಿ 1ರಂದು ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9:30ರಿಂದ ಉದ್ಯೋಗ ಮೇಳ ಆರಂಭವಾಗಲಿದೆ. ಈ ಮೇಳದಲ್ಲಿ ರಾಜ್ಯದ ಹಲವು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಉದ್ಯೋಗಾವಕಾಶಗಳನ್ನು ಒದಗಿಸಲಿವೆ.
ಅರ್ಹತೆ ಮತ್ತು ವಯೋಮಿತಿ
- ಶೈಕ್ಷಣಿಕ ಅರ್ಹತೆ: SSLC, PUC, ITI, BE ಹಾಗೂ ಯಾವುದೇ ಪದವಿ
- ವಯೋಮಿತಿ: 18 ರಿಂದ 35 ವರ್ಷ
- ಪುರುಷ, ಮಹಿಳೆ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅವಕಾಶ
ನೋಂದಣಿ ಮತ್ತು ದಾಖಲೆಗಳು
- ನೋಂದಣಿಗೆ ಯಾವುದೇ ಶುಲ್ಕವಿಲ್ಲ
- ಅಭ್ಯರ್ಥಿಗಳು ಕನಿಷ್ಠ 5 ಬಯೋಡೇಟಾ ಪ್ರತಿಗಳು
- ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ
ಉದ್ಯೋಗ ಮೇಳಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು
- ಚಿತ್ರದುರ್ಗ ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಘಟಕ,
- ಸಂಬಂಧಿಸಿದ ತಾಲ್ಲೂಕು ಪಂಚಾಯತ್ ಕಚೇರಿ,
- ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ
ಇವುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.