ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ ಫೆ. 08 : ರಾಜ್ಯ ಚುನಾವಣಾ ಆಯೋಗವು ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. ಫೆಬ್ರವರಿ 8 ರಿಂದ 28 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿಗಳ ವ್ಯಾಪ್ತಿಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಫೆ.8ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ.
ಫೆ.14 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ.
ಫೆ.15 ನಾಮಪತ್ರಗಳ ಪರಿಶೀಲನೆ,
ಫೆ.17 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ಮತದಾನ ಅವಶ್ಯವಿದ್ದರೆ
ಫೆ.25ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮರು ಮತದಾನ ಅವಶ್ಯವಿದ್ದರೆ
ಫೆ.27ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು.
ಫೆ.28ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಫೆ.28ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
ಚುನಾವಣಾ ನಡೆಯುವ ಗ್ರಾಮ ಪಂಚಾಯಿತಿ ಹಾಗೂ ಸದಸ್ಯ ಸ್ಥಾನಗಳ ವಿವರ:
ಚಳ್ಳಕೆರೆ ತಾಲ್ಲೂಕಿನ ನೆಲಗೇತನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದುರ್ಗ-06 ಕ್ಷೇತ್ರದ ಅನುಸೂಚಿತ ಪಂಗಡದ 1 ಸದಸ್ಯ ಸ್ಥಾನ,
ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಳ್ಳಿ-09 ಕ್ಷೇತ್ರದ ಅನುಸೂಚಿತ ಪಂಗಡ (ಮಹಿಳೆ) 1 ಸದಸ್ಯ ಸ್ಥಾನ, ಯಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮ್ಯಾಸರಹಟ್ಟಿ-2 ಕ್ಷೇತ್ರದ ಅನುಸೂಚಿತ ಪಂಗಡ 1 ಸದಸ್ಯ ಸ್ಥಾನ, ಜಂಪಣ್ಣ ನಾಯಕನಕೋಟೆ ಗ್ರಾಮ ಪಂಚಾಯಿತಿಯ ಜೋಡಿಚಿಕ್ಕೇನಹಳ್ಳಿ-7 ಕ್ಷೇತ್ರದ ಅನುಸೂಚಿತ ಜಾತಿ (ಮಹಿಳೆ) 1 ಸದಸ್ಯ ಸ್ಥಾನ ಹಾಗೂ
ಹೊಳಲ್ಕೆರೆ ತಾಲ್ಲೂಕಿನ ಹಿರೇಎಮ್ಮಿಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೂರು-3 ಕ್ಷೇತ್ರದ ಅನುಸೂಚಿತ ಜಾತಿ 1 ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಿಗಧಿಯಾಗಿದ್ದು, ಚುನಾವಣೆ ನಡೆಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The post ಚಿತ್ರದುರ್ಗ : ಗ್ರಾಮ ಪಂಚಾಯಿತಿ ಉಪಚುನಾವಣೆ: ಎಲ್ಲೆಲ್ಲಿ ಚುನಾವಣೆ, ಸಂಪೂರ್ಣ ಮಾಹಿತಿ..! first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/UI4Npk3
via IFTTT