
ಶ್ರೀ ಯೋಗೀಶ್ ಸಹ್ಯಾದ್ರಿ
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಶ್ರೀ ಯೋಗೀಶ್ ಸಹ್ಯಾದ್ರಿ, ಇವರು ಚಿತ್ರದುರ್ಗದ ಹೆಸರಾಂತ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರಾಗಿದ್ದು, ವೃತ್ತಿಯಲ್ಲಿ ಇಂಗ್ಲಿಷ್ ಭಾಷಾ ಉಪನ್ಯಾಸಕರಾಗಿದ್ದಾರೆ. ರಾಜ್ಯದ ಪ್ರತಿಷ್ಠಿತ ಮೂಡಬಿದಿರೆಯ ಆಳ್ವಾಸ್ ಕಾಲೇಜು, ಸೈಂಟ್ ಅಲೋಶಿಯಸ್ ಕಾಲೇಜು ಹಾಗೂ ಚಿತ್ರದುರ್ಗ ಸೇರಿದಂತೆ ಅನೇಕ ಪಿಯು ಕಾಲೇಜುಗಳಲ್ಲಿ ಇಂಗ್ಲಿಷ್ ಉಪನ್ಯಾಸಕರು, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ ಮೂಲಕ ಜಿಲ್ಲೆಯ ಸರ್ಕಾರಿ ಶಾಲೆ-ಕಾಲೇಜುಗಳು, ಸ್ಲಂ ಪ್ರದೇಶ ಹಾಗೂ ಹಾಸ್ಟೆಲ್ ಮಕ್ಕಳಿಗೆ ಉಚಿತವಾಗಿ ಇಂಗ್ಲಿಷ್ ಕಲಿಸಿಕೊಡುತ್ತಿದ್ದು, ಇವರ ಕಾರ್ಯವನ್ನು ಗುರುತಿಸಿ *ಸುವರ್ಣ Big 3 ಹೀರೋ,* *ಪಬ್ಲಿಕ್ ಟೀವಿ,* *ಟಿ.ವಿ9,* *BTV ಭರವಸೆಯ ಬೆಳಕು,* ಹೀಗೆ ಅನೇಕ ಕನ್ನಡ ಟೀವಿ ಚಾನಲ್ ಗಳು ಹಾಗೂ ಪತ್ರಿಕೆಗಳು ಪ್ರೋತ್ಸಾಹಿಸಿವೆ.

ಸಾಹಿತ್ಯ ಕ್ಷೇತ್ರದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡುತ್ತಿರುವ ಇವರು “ಕಣ್ಣು ಕವನದ ಮುನ್ನುಡಿ”, “ದ ಹಿಲ್ಸ್ ಅಲೈವ್” ಮತ್ತು “ಅಡ್ವಾನ್ಸ್ಡ್ ಇಂಗ್ಲಿಷ್ ಗ್ರಾಮರ್” ಎಂಬ 3 ಕೃತಿಗಳನ್ನು ರಚಿಸಿದ್ದು, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಖ್ಯಾತಿ ಪಡೆದಿವೆ. ಸ್ವತಃ ಕವಿಗಳೂ, ಸಾಹಿತಿಗಳೂ ಆಗಿರುವ ಇವರು ಪ್ರಸ್ತುತ *ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್* ಅಧ್ಯಕ್ಷರಾಗಿ 500 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಆಯೋಜಿಸಿದ್ದಾರೆ.

ಇವರ ಶೈಕ್ಷಣಿಕ ಮತ್ತು ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಚಿತ್ರದುರ್ಗ ನಗರದ ರೋಟರಿ ಕ್ಲಬ್ ಚಿನ್ಮೂಲಾದ್ರಿ ಸಂಸ್ಥೆಯು ‘ವರ್ಷದ ಅತ್ಯುತ್ತಮ ಶಿಕ್ಷಕ – 2025’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಹಾಗೆಯೇ, ಚಿತ್ರದುರ್ಗ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 537ನೇ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ‘ಕನಕ ಸಮ್ಮಾನ್ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇವೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1