ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ.11:
ಜಿಲ್ಲೆಯಲ್ಲಿ ಜನಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ (ರಿ) ವತಿಯಿಂದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಸಭೆ ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷ ನಾಗರಾಜ್ ಅವರ ಆದೇಶದಂತೆ, ವರ್ಕಿಂಗ್ ರಾಜ್ಯ ಕಾರ್ಯಾಧ್ಯಕ್ಷೆ ಶ್ರೀಮತಿ ಎನ್.ಎಸ್. ಸುವರ್ಣಮ್ಮ ಅವರ ನೇತೃತ್ವದಲ್ಲಿ ಸಭೆ ನಡೆದು, ಸಂಘಟನೆಯ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು.

ಸಭೆಗೆ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ಎಂ ಹಾಗೂ ಕಾಂಗ್ರೆಸ್ ಎಸ್ಸಿ ವಿಭಾಗದ ಜಿಲ್ಲಾಧ್ಯಕ್ಷ ಎಸ್. ಜಯಣ್ಣ ಅಧ್ಯಕ್ಷತೆ ವಹಿಸಿದರು. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಹೊಸ ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಕಾರ್ಮಿಕರ ಹಿತಾಸಕ್ತಿ, ಸದಸ್ಯತ್ವ ವಿಸ್ತರಣೆ ಮತ್ತು ಕಲ್ಯಾಣ ಯೋಜನೆಗಳ ಪ್ರಸಾರದ ಕುರಿತು ವಿವರವಾಗಿ ಚರ್ಚೆ ನಡೆಯಿತು.
ಈ ಸಭೆಯಲ್ಲಿ ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ಎಂ. ತಿಪ್ಪೇಸ್ವಾಮಿ, ಹಿರೇಹಳ್ಳಿ ದುರ್ಗೇಶ್, ಸುನೀಲ ತಿಪ್ಪೇಸ್ವಾಮಿ, ಪಾಂಡುರಂಗಪ್ಪ, ಗ್ರಾಮ ಪಂಚಾಯತ್ ಸದಸ್ಯ ಪ್ರತಾಪ್, ಹನುಮಂತಹಳ್ಳಿ ಚಂದ್ರಯ್ಯ, ಮಂಜುನಾಥ್ ಹಾಲೇಶ್, ಕೊಡಗನಹಳ್ಳಿ ಮಂಜುನಾಥ್, ಜನಾರ್ದನ, ನಿರಂಜನಮೂರ್ತಿ, ಜಿ.ಹೊಸಳ್ಳಿ ತಿಪ್ಪೇಸ್ವಾಮಿ, ಕೋಟಪ್ಪ ಸೇರಿದಂತೆ ಅನೇಕರು ಭಾಗವಹಿಸಿದರು.
ಮಹಿಳಾ ಘಟಕದ ರತ್ನಮ್ಮ ಮತ್ತು ಚೌಡಮ್ಮ ಕೂಡ ಸಭೆಯಲ್ಲಿ ಪಾಲ್ಗೊಂಡು ಮಹಿಳಾ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.
ಸಭೆಯ ಅಂತ್ಯದಲ್ಲಿ ಕಾರ್ಮಿಕರ ಹಕ್ಕುಗಳ ರಕ್ಷಣೆ, ಸಂಘಟನಾ ಬಲವರ್ಧನೆ ಹಾಗೂ ಸರಕಾರದ ಕಲ್ಯಾಣ ಯೋಜನೆಗಳು ತಳಮಟ್ಟದ ಕಾರ್ಮಿಕರಿಗೆ ತಲುಪುವಂತೆ ಕಾರ್ಯನಿರ್ವಹಿಸುವುದಾಗಿ ನಿರ್ಧಾರ ಕೈಗೊಳ್ಳಲಾಯಿತು.