ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ.17:
ನಗರದ ಕೆಳಗೋಟೆ ನಿವಾಸಿ ಹಾಗೂ ಕೆಇಬಿ (ಕರ್ನಾಟಕ ವಿದ್ಯುತ್ ಮಂಡಳಿ) ನಿವೃತ್ತ ನೌಕರರಾದ ಎಂ. ಮಲ್ಲೇಶಪ್ಪ (75) ಅವರು ಬುಧವಾರ ನಿಧನರಾದರು.
ಮೃತರು ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು–ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಬಾಗೇನಾಳ್ ಗ್ರಾಮದಲ್ಲಿ ನೆರವೇರಿತು ಎಂದು ಮೃತರ ಪುತ್ರ, ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಗುತ್ತಿಗೆದಾರರ ಸಂಘದ ಜಿಲ್ಲಾ ಕಾರ್ಯದರ್ಶಿಯಾದ ಎಂ. ಮೈಲಾರಪ್ಪ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರ ಸಂಘದ ಪ್ರಮುಖರು ಸೇರಿದಂತೆ ಹಲವರು ಮೃತರ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
Views: 39