ಚಿತ್ರದುರ್ಗ|ಮಲ್ಲಾಪುರ ಬಳಿ ಕೆಎಸ್‌ಆರ್‌ಟಿಸಿ ಬಸ್-ಲಾರಿ ಡಿಕ್ಕಿ: ಬಸ್ ಚಾಲಕ ಸೇರಿ ಇಬ್ಬರು ದುರ್ಮರಣ, 15 ಮಂದಿಗೆ ಗಾಯ.

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 13ರಲ್ಲಿ (NH-13) ಲಾರಿಗೆ ಕೆಎಸ್ಆರ್​ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ.

ಮೃತರ ವಿವರ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಬಾಪು ಪಾಟೀಲ್ (36 ವರ್ಷ) ಹಾಗೂ ಕೂಡ್ಲಿಗಿ ಮೂಲದ ಪ್ರಯಾಣಿಕ ಗಗನ್ (14 ವರ್ಷ) ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

15ಕ್ಕೂ ಹೆಚ್ಚು ಮಂದಿಗೆ ಗಾಯ: ಲಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನಲ್ಲಿದ್ದ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಎಲ್ಲಾ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಭೇಟಿ ಮತ್ತು ಪ್ರಕರಣ ದಾಖಲು: ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *