
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. 23 : ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರು ನಡೆಸಿರುವ ದಾಳಿಗೆ 26 ಮಂದಿ ಬಲಿಯಾದ ಹಿನ್ನಲೆಯಲ್ಲಿ ಇಂದು ನಗರದಲ್ಲಿ
ಭಾರತೀಯ ಜನತಾ ಪಾರ್ಟಿವತಿಯಿಂದ ಸಂತೇಪೇಟೆ ವೃತ್ತದಲ್ಲಿ ಮೊಂಬತ್ತಿಯನ್ನು ಹಚ್ಚಿ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು.
ನಗರದ ನೀಲಕಂಠೇಶ್ವರ ದೇವಾಲಯದಿಂದ ಸಂತೇಪೇಟೆ ವೃತ್ತದವರೆಗೂ ಕೈಯಲ್ಲಿ ಮೊಂಬತ್ತಿಗಳನ್ನು ಹಚ್ಚಿಕೊಂಡು ಮೌನ ಮೆರವಣಿಗೆಯನ್ನು ನಡೆಸಿದ ಬಿಜೆಪಿ ಪದಾಧಿಕಾರಿಗಳು ಭಯೋತ್ಪಾದಕರನ್ನು ತಯಾರು ಮಾಡುತ್ತಿರುವ ಪಾಕಿಸ್ತಾನದ ವಿರುದ್ದ ಘೋಷಣೆಗಳನ್ನು ಕೂಗಿ ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಿ ನಿಮ್ಮ ಜೊತೆಯಲ್ಲಿ ನಾವಿದ್ದೇವೆ ಎಂದು ಧೈರ್ಯವನ್ನು ತುಂಬಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳು ಜಮ್ಮು- ಕಾಶ್ಮೀರದ ಪಹಲ್ಗಾಮ್‍ನಲ್ಲಿ ದಾಳಿ ನಡೆಸಿ ದೇಶದ ಶಾಂತಿಯನ್ನು ಕದಡುತ್ತಿದ್ದಾರೆ. ನಮ್ಮ ದೇಶದ ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ಅಮಿತ್‍ಷಾ ಇವರುಗಳು ಉಗ್ರಗಾಮಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಪ್ರವಾಸಿಗರು ಯಾರೂ ಭಯ ಪಡುವುದು ಬೇಡ ಉಗ್ರಗಾಮಿಗಳು ನಡೆಸಿರುವ ದಾಳಿಯಲ್ಲಿ 26 ಮಂದಿ ಅಮಾಯಕರು ಬಲಿಯಾಗಿರುವುದನ್ನು ನಾವುಗಳು ಖಂಡಿಸುತ್ತೇವೆ. ದುಷ್ಟಕೂಟಕ್ಕೆ ನಮ್ಮ ದೇಶದ ಪ್ರಧಾನಿ ಮೋದಿರವರು ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ ಎಂದು ತಿಳಿಸಿದರು.
ಭಾರತದ ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರ ದಾಳಿಗೆ 26 ಮಂದಿ ಬಲಿಯಾಗಿರುವುದು ಅತ್ಯಂತ
ಖಂಡನೀಯ. ಈ ವಿಚಾರದಲ್ಲಿ ಯಾವ ಪಕ್ಷಗಳು ರಾಜಕಾರಣ ಮಾಡಬಾರದು. ದೇಶದ ಐಕ್ಯತೆ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟು
ಪ್ರದರ್ಶಿಸಬೇಕು. ಒಟ್ಟಾರೆ ಪಹಲ್ಗಾಮ್ ದಾಳಿಗೆ ರಾಜಕೀಯ ಬಣ್ಣ ಹಚ್ಚುವುದು ಬೇಡ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ಸಿದ್ದಾಪುರ, ಸಂಪತ್ ಕುಮಾರ್, ರೈತ
ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ನವೀನ್ ಚಾಲುಕ್ಯ, ನಂದಿ ನಾಗರಾಜ್, ಭಾರ್ಗವಿ ದ್ರಾವಿಡ್, ಬಸಮ್ಮ, ಶಂಭು, ರಾಮು,
ಹರೀಶ್, ಲೋಕೇಶ್ ಸಾರಂಗಮಠ, ಅರುಣ್ ಕುಮಾರಿ, ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ
ನಾಗರಾಜ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ನಾಗರಾಜ್‍ಬೇದ್ರೆ,
ಛಲವಾದಿ ತಿಪ್ಪೇಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.