ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆಯ ನಿವಾಸಿ ಹಾಗೂ ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಇ.ಕೆ. ಕೊಟ್ರ ಬಸವರಾಜು (67) ಅವರು ಶನಿವಾರ (ಡಿ. 20) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಖ್ಯಾತ ನ್ಯಾಯವಾದಿ ಇ.ಆರ್. ಕೊಟ್ರಪ್ಪ ಅವರ ಪುತ್ರರಾಗಿದ್ದ ಕೊಟ್ರ ಬಸವರಾಜು ಅವರು ಇಂದು ಬೆಳಿಗ್ಗೆ ಸುಮಾರು 11:00 ಗಂಟೆಯ ವೇಳೆಗೆ ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅಂತ್ಯಸಂಸ್ಕಾರ: ಮೃತರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಇಂದು ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ನಗರದ ಗಣ್ಯರು ಹಾಗೂ ಅಧಿಕಾರಿ ವಲಯದವರು ಸಂತಾಪ ಸೂಚಿಸಿದ್ದಾರೆ.
Views: 18