ಚಿತ್ರದುರ್ಗ| ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸಂವೇದನಾಶೀಲತೆ ಕಿಟ್, ಪೌಷ್ಟಿಕ ಆಹಾರ ವಿತರಣೆ.

ಚಿತ್ರದುರ್ಗ, ಸೆ. 4:

ವಿಶೇಷ ಅಗತ್ಯವುಳ್ಳ ಮಕ್ಕಳ ಶೀಘ್ರ ಪತ್ತೆ, ಸೂಕ್ತ ಆರೈಕೆ ಹಾಗೂ ಸಮಗ್ರ ಬೆಳವಣಿಗೆಗೆ ಪೋಷಕರು ಮತ್ತು ಸಮಾಜದ ಸಹಕಾರ ಅತ್ಯಗತ್ಯ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ಚಿತ್ರದುರ್ಗದ ಬಿ.ಆರ್.ಸಿ. ಕೇಂದ್ರದಲ್ಲಿ ‘ದಿ ಅಸೋಸಿಯೇಷನ್ ಪೀಪಲ್ ವಿತ್ ಡಿಸೆಬಿಲಿಟಿ’ (APD) ಸಂಸ್ಥೆಯ ಶೀಘ್ರ ಪತ್ತೆ ಹಚ್ಚುವಿಕೆ ಹಾಗೂ ಆರಂಭಿಕ ಮಧ್ಯಸ್ಥಿಕೆ (Early Intervention) ಕಾರ್ಯಕ್ರಮದ ವತಿಯಿಂದ ಸೆ. 3ರಂದು ಸಂವೇದನಾಶೀಲತೆ ಕಿಟ್ ಹಾಗೂ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ‘ORACLE’ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಚಿತ್ರದುರ್ಗದ DDW ಶ್ರೀಮತಿ ವೈಶಾಲಿ ಉದ್ಘಾಟಿಸಿದರು. ಮಾತನಾಡಿದ ಅವರು, ವಿಶೇಷ ಅಗತ್ಯವುಳ್ಳ ಮಕ್ಕಳ ರಕ್ಷಣೆ, ಆರೈಕೆ ಹಾಗೂ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ವಹಿಸಬೇಕಾದ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿದರು. ಮಕ್ಕಳ ಅಗತ್ಯಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಮಾರ್ಗದರ್ಶನ ಮತ್ತು ನೆರವು ನೀಡುವುದರಿಂದ ಅವರ ಬೆಳವಣಿಗೆಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು.

ಚಿತ್ರದುರ್ಗದ ಸಿಡಿಪಿಒ ಶ್ರೀಮತಿ ವೀಣಾ ಅವರು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಲಭ್ಯವಿರುವ ಪೌಷ್ಟಿಕ ಆಹಾರ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅರ್ಹ ಕುಟುಂಬಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

BERTನ ಶ್ರೀ ರಾಜಣ್ಣ ಅವರು ಮಕ್ಕಳಿಗೆ ವಿತರಿಸಲಾದ ‘ಸಂವೇದ

ನಾಶೀಲತೆ ಕಿಟ್’ನ ಮಹತ್ವವನ್ನು ವಿವರಿಸಿದರು. ಮಕ್ಕಳ ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆಯಲ್ಲಿ ಕಿಟ್‌ನಲ್ಲಿರುವ ಸಾಮಗ್ರಿಗಳು ಹೇಗೆ ಸಹಕಾರಿಯಾಗುತ್ತವೆ ಮತ್ತು ಅವುಗಳನ್ನು ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಬಳಸುವ ವಿಧಾನಗಳ ಕುರಿತು ಪೋಷಕರಿಗೆ ಮಾರ್ಗದರ್ಶನ ನೀಡಿದರು.

APD ಸಂಸ್ಥೆಯ ಶ್ರೀಮತಿ ನಂದಿನಿ ಅವರು ನೂತನವಾಗಿ ನೇಮಕಗೊಂಡ ‘ಮಾತ’ ಹುದ್ದೆಯ ಸಿಬ್ಬಂದಿಗಳನ್ನು ಪೋಷಕರಿಗೆ ಪರಿಚಯಿಸಿ, ಅವರ ಜವಾಬ್ದಾರಿಗಳು ಹಾಗೂ ಮಕ್ಕಳಿಗೆ ನೀಡಬೇಕಾದ ಅಗತ್ಯ ಮಾರ್ಗದರ್ಶನದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬಿ.ಆರ್.ಸಿ.ಯ ಶ್ರೀ ಸಂಪತ್ ಕುಮಾರ್, BERTನ ಶ್ರೀಮತಿ ಪುಷ್ಪ, MRWನ ಶ್ರೀ ಮೈಲಾರಪ್ಪ ಹಾಗೂ APD ಸಂಸ್ಥೆಯ ಸಿಬ್ಬಂದಿಗಳಾದ ಶ್ರೀಮತಿ ನಂದಿನಿ ಎಸ್., ಶ್ರೀ ವೇದಮೂರ್ತಿ ಪಿ.ಎಲ್., ಕುಮಾರಿ ಪುಷ್ಪ ಕೆ.ಬಿ., ಶ್ರೀಮತಿ ಸುಮಂಗಲಾ ಮತ್ತು ಕುಮಾರಿ ಬಿ.ಬಿ. ಹಾಜಿರಾ ಉಪಸ್ಥಿತರಿದ್ದರು.

ಚಿತ್ರದುರ್ಗ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ VRW ಮತ್ತು URW ಕಾರ್ಯಕರ್ತರು, ವಿಶೇಷ ಅಗತ್ಯವುಳ್ಳ ಮಕ್ಕಳು ಹಾಗೂ ಅವರ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಕ್ಕಳಿಗೆ ಸಂವೇದನಾಶೀಲತೆ ಕಿಟ್ ಹಾಗೂ ಪೌಷ್ಟಿಕ ಆಹಾರ ವಿತರಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ, ಅವರಿಗೆ ಅಗತ್ಯವಾದ ಪೌಷ್ಟಿಕತೆ, ತರಬೇತಿ, ಆರೈಕೆ ಮತ್ತು ಮಾರ್ಗದರ್ಶನ ಒದಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬ ಸಂದೇಶ ಕಾರ್ಯಕ್ರಮದಲ್ಲಿ ಮೂಡಿಬಂದಿತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *