ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ, ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆ ಮತ್ತು ನಾವಿನ್ಯತೆ ಚಟುವಟಿಕೆಗಳ ಕುರಿತಂತೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.
![](https://samagrasuddi.co.in/wp-content/uploads/2024/12/image-48-300x135.png)
ಚಿತ್ರದುರ್ಗ ಡಿ.6: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ, ಎಸ್ ಎಸ್ ಎಲ್ ಸಿ ಫಲಿತಾಂಶ ಉತ್ತಮಪಡಿಸಲು ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಪನಿರ್ದೇಶಕರಾದ ಎಂ ಆರ್ ಮಂಜುನಾಥ್ ಎಸ್ ಎಸ್ ಎಲ್ ಸಿ ಪರೀಕ್ಷೆಯೂ ವಿದ್ಯಾರ್ಥಿಗಳಿಗೆ ಬಹು ಮುಖ್ಯ ಘಟ್ಟವಾಗಿದ್ದು,ಫಲಿತಾಂಶಕ್ಕೆ ಸಂಬಂಧಿಸಿದಂತೆ ಶಿಕ್ಷಕರು ಬಹು ಮುಖ್ಯ ಪಾತ್ರವಹಿಸುತ್ತಾರೆ. ಈ ವರ್ಷ ನಿಗದಿಯಾದಂತೆ ಪರೀಕ್ಷೆಗೆ ಪೂರಕವಾದ ಕಾರ್ಯಗಳು ನಡೆಯುತ್ತಿದ್ದು, ಮುಖ್ಯ ಪರೀಕ್ಷೆಗೆ ಶಿಕ್ಷಣ ಇಲಾಖೆ ತಾತ್ಕಲಿಕ ವೇಳಪಟ್ಟಿ ಹೊರಡಿಸಿದ್ದು,ಇನ್ನುಳಿದ ದಿನಗಳಲ್ಲಿ ಪರೀಕ್ಷೆಗೆ ಬೇಕಾದ ತಯಾರಿಯನ್ನು ಸಹಶಿಕ್ಷಕರ ಜೊತೆಗೂಡಿ ಮುಖ್ಯ ಶಿಕ್ಷಕರು ಕಾರ್ಯೋನ್ಮುಖವಾಗಿ,ಜಿಲ್ಲೆಗೆ,ರಾಜ್ಯಕ್ಕೆ ಉತ್ತಮ ಫಲಿತಾಂಶ ತರಲು ಎಲ್ಲರೂ ಶ್ರಮಿಸಲು ಸೂಚಿಸಿದರು.
ಕಾರ್ಯಕ್ರಮದಲ್ಲಿ ಎಸ್ ಸಿ ಪ್ರಸಾದ್ ಹಿರಿಯ ಉಪನ್ಯಾಸಕರು, ವಿಷಯ ಪರೀವೀಕ್ಷಕರುಗಳಾದ ಕೆ.ಜಿ.ಪ್ರಶಾಂತ್ ,ಶಿವಣ್ಣ ಮತ್ತು ಚಂದ್ರಶೇಖರ್ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.