
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮಾ. 06: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಸಿಪಿ. ಟಿಎಸ್ಪಿ. ಹಣವನ್ನು ಐದು ಉಚಿತ ಗ್ಯಾರೆಂಟಿಗಳಿಗೆ ಬಳಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಮಾ.6 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಬುಡಕಟ್ಟು ಜನಾಂಗ, ಅಲೆಮಾರಿ, ಅರೆಅಲೆಮಾರಿಗಳ ಅಭ್ಯುದಯಕ್ಕಾಗಿ ಮೀಸಲಿಟ್ಟಿರುವ ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದು ಅಕ್ಷಮ್ಯ ಅಪರಾಧ. ಹಾಗಾಗಿ ಈ ಬಾರಿಯ ಬಜೆಟ್‍ನಲ್ಲಿ ಎಸ್ಸಿಪಿ, ಟಿ.ಎಸ್ಪಿ. ಹಣವನ್ನು ಬೇರೆ ಉದ್ದೇಶಗಳಿಗೆ ಬಳಸುವುದಿಲ್ಲವೆಂದು ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಎಸ್ಸಿಪಿ. ಟಿಎಸ್ಪಿ. ರಾಜ್ಯ ಜನಾಂದೋಲನ ಸಮಿತಿ ಸದಸ್ಯ ಸಂಸದರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನಸಭೆ ಉಪ ನಾಯಕ ಅರವಿಂದ ಬೆಲ್ಲದ್, ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಕೆ.ಎಸ್.ನವೀನ್, ಚಿದಾನಂದಗೌಡ, ಮಾಜಿ ವಿಧಾನಪರಿಷತ್ಸದಸ್ಯ ವೈ.ಎ.ನಾರಾಯಣಸ್ವಾಮಿ, ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಲಿಂಗಮೂರ್ತಿ, ನಿವೃತ್ತ ಐ.ಎ.ಎಸ್.ಅಧಿಕಾರಿ ಲಕ್ಷ್ಮಿನಾರಾಯಣ, ಎಸ್ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ರಾಜ್ಯ ಬಿಜೆಪಿ.ಕಾರ್ಯದರ್ಶಿಗಳಾದ ಅಂಬಿಕಾ ಹುಲಿನಾಯ್ಕರ್, ವಿನಯ್ ಬಿದರೆ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಹನುಮಂತಪ್ಪ, ಎಸ್ಸಿ. ಮೋರ್ಚಾ ಹನುಮಂತಪ್ಪ ಓಬಲೇಶ್, ಓ.ಬಿ.ಸಿ.ಮೋರ್ಚಾದ ನರೇಂದ್ರ ರಂಗಪ್ಪ, ರಾಜ್ಯ ಮಾಧ್ಯಮ ವಕ್ತಾರ ಲೋಹಿತ್, ಎಸ್ಸಿ ಮೋರ್ಚಾ ಶಿವಣ್ಣ, ಪಕ್ಷದ
ಕಾರ್ಯಕರ್ತರು, ಪದಾಧಿಕಾರಿಗಳು, ದಲಿತ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು.
ಪ್ರವಾಸಿ ಮಂದಿರದಿಂದ ಬೆಳಿಗ್ಗೆ 10-30 ಹೊರಡಲಿರುವ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು, ದಲಿತ ಪರ ಸಂಘಟನೆಗಳು
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್ ಕೋರಿದ್ದಾರೆ.