ಚಿತ್ರದುರ್ಗ |ಇದು “ಸಾಲದ”ಬಜೆಟ್; ಬಿಜೆಪಿ ಯುವ ಮುಖಂಡ : ಅನಿತ್ ಕುಮಾರ್ ಜಿ ಎಸ್.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಮಾ. 07 : ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ರಾಜ್ಯದ ಆರ್ಥಿಕ ಶಿಸ್ತಿನ ದಾಖಲೆಯನ್ನು ಮುರಿದು, ಅತ್ಯಂತ ಹೆಚ್ಚು ಸಾಲ ಮಾಡಿದ ದಾಖಲೆ ಮಾಡಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ಈ ಬಜೆಟ್ ನ ಪ್ರಮುಖ
ಅಂಶ ರೈತಪರ ಯಾವುದೇ ಹೊಸ. ಯೋಜನೆಗಳಿಲ್ಲದ ನಿರಾಶಾದಾಯಕ ಬಜೆಟ್ ಇದಾಗಿದೆ ಎಂದು ಬಿಜೆಪಿ ಯುವ ಮುಖಂಡರಾದ ಅನಿತ್ ಕುಮಾರ್ ಜಿ ಎಸ್ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ಮಂಡಿಸಿದ ಆಯವ್ಯಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬೋಗಸ್ ಬಜೆಟ್‍ನಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ನೀಡಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳಿಗೆ ಸಂಪೂರ್ಣ ವಿರುದ್ಧವಾದಂತಹದ್ದು!! ಕಾಂಗ್ರೆಸ್ ಪಕ್ಷಕ್ಕೆ ಬಾಬಾ ಸಾಹೇಬರ ಮೇಲೆ
ಎಷ್ಟು ದ್ವೇಷವಿದೆ ಎಂಬುದು ಸಿದ್ದರಾಮಯ್ಯ ಅವರ ಸಂವಿಧಾನ ವಿರೋಧಿ ಬಜೆಟ್ ನಿಂದ ಮತ್ತೊಮ್ಮೆ ಜಗಜ್ಜಾಹೀರಾಗಿದೆ ಎಂದಿದ್ದಾರೆ.

ಈ ಹಿಂದೆ ಬಿಜೆಪಿ ಸರ್ಕಾರ ಘೋಷಣೆ ಮಾಡಿದ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆ ಆಗಿಲ್ಲ..ಮತ್ತು ಈ ಬಜೆಟ್‍ನಲ್ಲಿ
ಚಿತ್ರದುರ್ಗ ,ದಾವಣಗೆರೆ ಜಿಲ್ಲೆಗೆ ಯಾವುದೇ ಯೋಜನೆ ಘೋಷಣೆ ಮಾಡದೆ ಮಧ್ಯ ಕರ್ನಾಟಕ ಜಿಲ್ಲೆಗಳನ್ನು ಕಡೆಗಣಿಸಿದ್ದಾರೆ ಎಂದು
ತಿಳಿಸಿದ್ದಾರೆ.

Leave a Reply

Your email address will not be published. Required fields are marked *