ಚಿತ್ರದುರ್ಗ, ಆಗಸ್ಟ್, 28: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಹುಚ್ಚವ್ವನಹಳ್ಳಿ, ಹಿರಿಯೂರು ಹಾಗೂ ಜೆ.ಜಿ.ಹಳ್ಳಿ ಹೋಬಳಿಯ ಕಾಟನಾಯಕನಹಳ್ಳಿ ಕಂದಾಯ ವೃತ್ತಗಳ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
![](https://samagrasuddi.co.in/wp-content/uploads/2024/08/image-126.png)
ಹಾಗಾದರೆ ಅರ್ಜಿಸಲ್ಲಿಹಬಯಸುವವರು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎಂದು ಇಲ್ಲಿ ತಿಳಿಯಿರಿ. ಗ್ರಾಮ ಸಹಾಯಕ ಹುದ್ದೆಯು ತಾತ್ಕಾಲಿಕ ಹುದ್ದೆ ಆಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗದಿ ಆಗುವಂತಹ ಗೌರವಧನ ಪಾವತಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ನೇಮಕಾತಿಗೆ ಕ್ರಮವಹಿಸಲಾಗುವುದು.
ಏನೆಲ್ಲ ಅರ್ಹತೆಗಳಿರಬೇಕು?: ನಿಗದಿತ ನಮೂನೆ-1ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 25 ವರ್ಷಗಳು ಪೂರ್ಣಗೊಂಡಿರಬೇಕು. ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸಬೇಕಾಗುತ್ತದೆ. ಸಾಮಾನ್ಯ ಕಂಪ್ಯೂಟರ್ ಸಾಕ್ಷರತೆಯ ತರಬೇತಿ ಪಡೆದಿರುವ ಕುರಿತು ಪ್ರಮಾಣ ಪತ್ರ ಲಗತ್ತಿಸಬೇಕು.
ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ ದಾಖಲೆ ಲಗತ್ತಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಕ್ರಿಮಿನಲ್ ಮೊಕದ್ದಮೆ ಹಿನ್ನಲೆಯುಳ್ಳವರಾಗಿರಬಾರದು. ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳ ನಿವಾಸಿಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಹಶೀಲ್ದಾರ್ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.