ಹುಲ್ಲೂರು ಸಿಂಗಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ: ಬಿಜೆಪಿ ಕಾರ್ಯಕರ್ತರಿಂದ ಸ್ವಚ್ಛತಾ ಹಾಗೂ ಸಸಿ ನೆಡುವ ಕಾರ್ಯಕ್ರಮ.

ಪ್ರಪಂಚದಲ್ಲಿಯೇ ಶ್ರೇಷ್ಠ ವ್ಯಕ್ತಿ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಡಾ. ಸಿದ್ದಾರ್ಥ್ .

ಭೀಮಸಮುದ್ರ:

ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203

ಸಮೀಪದ ಹುಲ್ಲೂರು ಸಿಂಗಾಪುರ ಗ್ರಾಮದ ಮಧ್ಯದಲ್ಲಿರುವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ಮಂಡಲದ ವತಿಯಿಂದ ವಿಶ್ವ ಪರಿಸರ ದಿನಾಚರಣೆ. ಅಂಗವಾಗಿ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮ ಮತ್ತು ನರೇಂದ್ರ ಮೋದಿಯವರು 12 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಚಿತ್ರದುರ್ಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಡಾ. ಸಿದ್ದಾರ್ಥ್. ಮಾತನಾಡಿ ಸನ್ಮಾನ್ಯ ನರೇಂದ್ರ ಮೋದಿಯವರು ಪರಿಸರದ ಬಗ್ಗೆ ಹಾಗೂ ಸ್ವಚ್ಛತೆ ಬಗ್ಗೆ ಅತಿ ಹೆಚ್ಚು ಕಾಳಜಿಯನ್ನು ನೀಡುತ್ತಾರೆ ಆ ಉದ್ದೇಶದಿಂದ ಇಂದು ದೇವಸ್ಥಾನದ ಆವರಣದಲ್ಲಿ ನಮ್ಮ ಎಲ್ಲ ಮುಖಂಡರು ಸೇರಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದೇವೆ ಹಾಗೂ ಬುಧವಾರ ದಿನಕ್ಕೆ ಸನ್ಮಾನ್ಯ ನರೇಂದ್ರ ಮೋದಿಯವರು ಪ್ರಧಾನಿ ಆಗಿ 12 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ನಾಗರಾಜ್ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಕುಮಾರ್ ಜಿಲ್ಲಾ ಎಸ್ ಸಿ ಮೋರ್ಚ ಅಧ್ಯಕ್ಷರಾದ ಪರಮೇಶ್ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಸಚಿನ್ ಮಹಿಳಾ ಮೋರ್ಚ ಅಧ್ಯಕ್ಷರಾದ ರಾದ ಕವಿತಾ ಮುಖಂಡರಾದ ಸಿರಿ ಪಕ್ಷದ ಕಾರ್ಯಕರ್ತರು ಗ್ರಾಮದ ಮುಖಂಡರ ಹುಲ್ಲೂರು ಸಿಂಗಾಪುರ ಗ್ರಾಮಸ್ಥರು ಉಪಸ್ಥಿತರಿದ್ದರು.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp:

https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *