ಬಿ.ಜಿ. ಗೋವಿಂದಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಿಗೆ ಮನವಿ.

ಚಿತ್ರದುರ್ಗ ಆ. 6

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಕರ್ನಾಟಕ ರಾಜ್ಯದಲ್ಲಿ ನಮ್ಮ ಕುರುಬ ಜನಾಂಗದ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಮತ್ತು ಪಕ್ಷದಲ್ಲಿ ಪ್ರಾತಿನಿಧ್ಯ ಕಲ್ಪಿಸಿಕೊಡುವುದರ ಜೊತೆಗೆ ಸಂಪುಟ ವಿಸ್ತರಣೆಯಲ್ಲಿ ಬಾಕಿ ಉಳಿದಿರುವ ಒಂದು ಸ್ಥಾನಕ್ಕೆ ಕಾಗಿನೆಲೆ ಕನಕ ಗುರುಪೀಠದ ಆಡಳಿತಾಧಿಕಾರಿಗಳು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಜಿ.ಗೋವಿಂದಪ್ಪ ರವರಿಗೆ ಸಚಿವ ಸ್ಥಾನಕ್ಕೆ ಪರಿಗಣಿಸುವಂತೆ ಒತ್ತಾಯಿಸಿ ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳು ಬುಧವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು, ಹಾಗೂ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 3ನೇ ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿರುವ ನಮ್ಮ ಕುರುಬ ಜನಾಂಗಕ್ಕೆ ಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ನೀಡುವುದಾದರೆ, 4 ರಿಂದ 5 ಸಚಿವ ಸ್ಥಾನಗಳಿಗೆ ಪರಿಗಣಿಸಬಹುದಾಗಿರುತ್ತದೆ. ಆದರೆ ಇದು ಎಲ್ಲಿಯೂ ಪಾಲನೆಯಾಗುತ್ತಿಲ್ಲ. 2023ನೇ ಸಾಲಿನಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಿದ್ದರಾಮಯ್ಯ ರವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ ಹಿನ್ನಲೆಯಲ್ಲಿ ಅವರನ್ನು ಹೊರತುಪಡಿಸಿ, ಕೇವಲ ಒಂದೇ ಒಂದು ಸಚಿವ ಸ್ಥಾನ ನೀಡಿತ್ತು. ಮುಖ್ಯಮಂತ್ರಿ ಸ್ಥಾನ ಬಹುಮುಖ್ಯ ಸ್ಥಾನವಾಗಿದ್ದರಿಂದ ನಮ್ಮ ಸಮುದಾಯ ಎಲ್ಲಿಯೂ ಸಹ ಪ್ರಶ್ನೆ ಮಾಡಲಿಲ್ಲ. ನಂತರ ಬೆಳವಣಿಗೆಯಲ್ಲಿ ಸಿದ್ದರಾಮಯ್ಯರವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಿ, ಡಿ.ಕೆ.ಶಿವಕುಮಾರ್ ರವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತಂದ ನಂತರ ಪ್ರಥಮ ಸಚಿವ ಸಂಪುಟ ರಚನೆಯಲ್ಲಿ ನಮ್ಮ ಕುರುಬ ಜನಾಂಗಕ್ಕೆ ಸೇರಿದ ಹಳೇ ಮೈಸೂರು ವಿಭಾಗಕ್ಕೆ ಸೇರಿದ ಇಬ್ಬರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಲಾಯಿತು. ನಂತರ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ನಮ್ಮ ಸಮುದಾಯ ವಿಧಾನಪರಿಷತ್ ಸದಸ್ಯೆ ಶ್ರೀಮತಿ ಗಾಯಿತ್ರಿ ಶಾಂತೇಗೌಡ ಇವರ ಹೆಸರನ್ನು ಬಹಿರಂಗಪಡಿಸಲಾಯಿತಾದರೂ, ಪ್ರಮಾಣ ವಚನ ಸ್ವೀಕರಿಸುವ ಹೊತ್ತಿಗೆ ಅವರ ಹೆಸರನ್ನು ಕೈಬಿಟ್ಟು 19 ಸಚಿವ ಸ್ಥಾನಗಳನ್ನು ವಿವಿಧ ಸಮುದಾಯದವರಿಗೆ ಪರಿಗಣಿಸಿ ನಮ್ಮ ಸಮುದಾಯವನ್ನು ನಿರ್ಲಕ್ಷಿಸಿ ಅನ್ಯಾಯ ಮಾಡಲಾಗಿದೆ.

ಕಾಗಿನೆಲೆ ಕನಕ ಗುರುಪೀಠದ ಆಡಳಿತಾಧಿಕಾರಿಯಾಗಿರುವ ಶಾಸಕ ಬಿ.ಜಿ.ಗೋವಿಂದಪ್ಪನವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ನಮ್ಮ ಸಮಾಜಕ್ಕೆ ಅತೀವ ನೋವುಂಟು ಮಾಡಿದೆ ಆದ್ದರಿಂದ ಬಾಕಿ ಉಳಿದಿರುವ ಒಂದು ಸಚಿವ ಸ್ಥಾನವನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಜಿ.ಗೋವಿಂದಪ್ಪರವರಿಗೆ ನೀಡಿ ಸಾಮಾಜಿಕ ನ್ಯಾಯದ ಸಿದ್ಧಾಂತವನ್ನು ಮೈಗೂಡಿಸಿಕೊಂಡಿರುವ ಕಾಂಗ್ರೆಸ್ ಪಕ್ಷವು ಮುಂದೆ ಸರ್ಕಾರದಿಂದ ನಿಗಮ, ಮಂಡಳಿ ಮತ್ತು ಪ್ರಾಧಿಕಾರದ ಅಧ್ಯಕ್ಷ ಮತ್ತು ನಿರ್ದೇಶಕರ ಸ್ಥಾನಗಳಿಗೆ ಹೆಚ್ಚು ಪ್ರಾತಿನಿಧ್ಯವನ್ನು ಕಲ್ಪಿಸಿ ಜೊತೆಗೆ ತಮ್ಮ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿಯೂ ಸಹ ಪದಾಧಿಕಾರಿಗಳಲ್ಲಿ ಕುರುಬ ಸಮುದಾಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿ, ನಮ್ಮ ಮನವಿಯನ್ನು ಪರಿಗಣಿಸಿ ಸಾಮಾಜಿಕ ನ್ಯಾಯದ ಸಿದ್ಧಾಂತವನ್ನು ಎತ್ತಿಹಿಡಿದು “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬಂತೆ ನಮ್ಮ ಕುರುಬ ಜನಾಂಗಕ್ಕೆ ನ್ಯಾಯ ಒದಗಿಸಿಕೊಡಬೇಕಾಗಿ ಮನವಿ ಮಾಡಿಕೊಳ್ಳಲಾಯಿತು.

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿಗಳು ಕುರುಬ ಜನಾಂಗದ ನಾಯಕರಾದ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ವೈಯತ್ತಿಕವಾಗಿ ಮನವಿ ಸಲ್ಲಿಸಲಾಯಿತು. ಮನವಿ ಆಲಿಸಿದ ಬಿ.ಕೆ.ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಂದಿನ ದಿನಗಳಲ್ಲಿ ಬಿ.ಜಿ. ಗೋವಿಂದಪ್ಪನವರಿಗೆ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಈ ಸಮಯದಲ್ಲಿ ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಶ್ರೀರಾಮ್, ನಗರಸಭೆ ಮಾಜಿ ಅಧ್ಯಕ್ಷ ಗೌರವಾಧ್ಯಕ್ಷರಾದ ಹೆಚ್.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್, ಉಪಾಧ್ಯಕ್ಷರಾದ ಶಶಿಕುಮಾರ್ ಬಾಲು, ಖಂಜಾಚಿ ಆರ್.ಮೃತುಂಜಯ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಪೊಲೀಸ್ ಬಾಬಣ್ಣ, ಶಶಿ ಹೊಳಲ್ಕೆರೆ, ಗಾಡಿ ಮಂಜುನಾಥ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *