Nov 05: ವಿಶ್ವಕಪ್ ಜಯಿಸಿ ದೇಶಕ್ಕೆ ಕೀರ್ತಿ ತಂದಿರುವ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಕರ್ನಾಟಕದಿಂದ ವಿಶ್ವಕಪ್ ತಂಡದಲ್ಲಿ ಭಾಗವಹಿಸಿದ ಆಟಗಾರ್ತಿಯರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಗೌರವ ಘೋಷಿಸಲಾಯಿತು.
ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಆಟಗಾರ್ತಿಯರಿಗೆ ತಲಾ ₹10 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ.
ವಿಶ್ವಕಪ್ ತಂಡದಲ್ಲಿ ಇರುವ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೆ ತಲಾ ₹2 ಲಕ್ಷ ಬಹುಮಾನ ನೀಡುವುದನ್ನೂ ಸಿಎಂ ಘೋಷಿಸಿದರು.
ತಂಡದ ನಾಯಕಿ ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವವನ್ನು ಸಿಎಂ ವಿಶೇಷವಾಗಿ ಹೊಗಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹಾಗೂ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಜರಿದ್ದರು.
ರಾಜ್ಯದ ಅಂಧ ಮಹಿಳಾ ಕ್ರಿಕೆಟ್ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯೆಂದು ಕ್ರೀಡಾ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
Views: 19