ಚಿತ್ರದುರ್ಗ: ಚಾಕೊಲೇಟ್ ಎಂದು ಭಾವಿಸಿ ಮಾತ್ರೆ ತಿಂದ 4 ವರ್ಷದ ಮಗು ಸಾವನ್ನಪ್ಪಿದೆ. ಈ ಘಟನೆ ಚಿತ್ರದುರ್ಗ ಕಡಬನಕಟ್ಟೆ ಹಳ್ಳಿಯಲ್ಲಿ ನಡೆದಿದೆ.

ಹೃತ್ವಿಕ್(4) ಮೃತ ಕಂದಮ್ಮ. ಚಾಕೊಲೇಟ್ ಎಂದು ಭಾವಿಸಿ ಮಾತ್ರೆ ತಿಂದು ಈ 4 ವರ್ಷದ ಮಗು ಸಾವನ್ನಪ್ಪಿದೆ. ತುರುವನೂರು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ನೋವು ಹೇಳತೀರದು. ಇತ್ತೀಚೆಗೆ ಮೃತ ಮಗುವಿನ ತಾಯಿ ಪವಿತ್ರಾ ಎಂಬುವವರಿಗೆ ಶಸ್ತ್ರಚಿಕಿತ್ಸೆಯೊಂದು ನಡೆದಿತ್ತು. ಈ ಹಿನ್ನಲೆ ವೈದ್ಯರು ನೀಡಿದ್ದ ಮಾತ್ರೆಗಳನ್ನು ಮನೆಯಲ್ಲಿಟ್ಟಿದ್ದರು. ಮಗು ಆಟವಾಡುತ್ತಿತ್ತು. ಅಕಸ್ಮಾತ್ ಆಗಿ ಚಾಕೊಲೇಟ್ ಎಂದು ಭಾವಿಸಿ ಮಾತ್ರೆಗಳನ್ನು ಸೇವಿಸಿದ್ದ ಮಗು ಅಸ್ವಸ್ಥಗೊಂಡಿತ್ತು.ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಿಲಾಗಿತ್ತು.
ಕಳೆದ 4 ದಿನಗಳ ಹಿಂದೆ ಮನೆಯಲ್ಲಿದ್ದ ಮಾತ್ರೆ ಸೇವಿಸಿದ್ದ ಮಗುವನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಕಂದನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1