
ಇಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ/ Karnataka School Examination and Assessment Board ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದೆ. ಮತ್ತು ಈಗಾಗಲೇ ಎಲ್ಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೂ ತಮ್ಮ ತಮ್ಮ ಫಲಿತಾಂಶವನ್ನು ನೋಡಿಕೊಂಡಾಗಿದೆ. ಈ ವರ್ಷವೂ ದಕ್ಷಿಣ ಕನ್ನಡ ಜಿಲ್ಲೆಯೇ (97.37%) ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮೊದಲಿದ್ದು ಗದಗ ಜಿಲ್ಲೆಯು (66.91%) ಫಲಿತಾಂಶವನ್ನು ಪಡೆದು ಕೊನೆಯ ಸ್ಥಾನದಲ್ಲಿದೆ.
ಇನ್ನು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಇಲಾಖೆಯು ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದ್ದು ಸದರಿ ಅವಕಾಶದ ಲಾಭವನ್ನು ಪಡೆಯುವಂತೆ ತಿಳಿಸಲಾಗಿದೆ.
ಇನ್ನು ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನೂ ನೀಡಲಾಗಿದೆ. ಯಾವೆಲ್ಲ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿಯನ್ನು ಪಡೆಯಲು ಇಚ್ಛಿಸುತ್ತಾರೋ ಅಂಥವರು ಇದೇ ಏಪ್ರಿಲ್ 10 ರಿಂದ ಏಪ್ರಿಲ್ 16 ರವರೆಗೆ ಅರ್ಜಿಸಲ್ಲಿಸಬಹುದು.
ಹಾಗೆಯೇ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಿದ ನಂತರ ಸ್ಕ್ಯಾನ್ಡ್ ಉತ್ತರ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇದೇ ಏಪ್ರಿಲ್ 14 ರಿಂದ ಏಪ್ರಿಲ್ 19 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ನಿಮಗಿದು ನೆನಪಿರಲಿ: ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಹಾಗೆಯೇ ಪರೀಕ್ಷಾ ಮೌಲ್ಯಮಾಪನದಲ್ಲಿ ಗೊಂದಲ ಇರುವ ವಿದ್ಯಾರ್ಥಿಗಳು ಸದರಿ ಪರೀಕ್ಷೆಯ ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಅಂದರೆ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ಇದೇ ಏಪ್ರಿಲ್ 14 ರಿಂದ ಏಪ್ರಿಲ್ 20 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ. ಆದ್ದರಿಂದ ಯಾವೆಲ್ಲ ವಿದ್ಯಾರ್ಥಿಗಳು ಸದರಿ ಪರೀಕ್ಷೆಯ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಬಯಸುತ್ತೀರೋ ಅಂಥವರು ಮೇಲೆ ತಿಳಿಸಿದ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1