ಚಿತ್ರದುರ್ಗ ನ. 19
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಮಾಡದೇ ಜಾತಿ ಜಾತಿಗಳ ಮಧ್ಯ ಸಂಘರ್ಷ ತಂದಿರುವುದೇ ದೊಡ್ಡ ಸಾಧನೆಯಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ವೈ.ಎ ನಾರಾಯಣಸ್ವಾಮಿ ಹೇಳಿದರು.
ಚಿತ್ರದುರ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಸಮಾಲೋಚನೆ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಬಿಹಾರ ಚುನಾವಣಾ ಫಲಿತಾಂಶಗಳು ಈ ಕ್ಷೇತ್ರದ ಚುನಾವಣೆಯ ಮೇಲೂ ಪರಿಣಾಮ ಬೀರುತ್ತವೆ, ಪ್ರಧಾನಿ ನರೇಂದ್ರ ಮೋದಿಜಿ ಅಮಿತ್ ಶಾ ಅವರ ನಾಯಕತ್ವ ಬಿಹಾರ ರಾಜ್ಯ ಬಿಜೆಪಿ ಭದ್ರಕೋಟೆಯಾಗಿದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷ ಧೋಳಿಪಟವಾಗಿ ಬಾಜಪ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು.
ರಾಜ್ಯದ ಜನರಲ್ಲಿ ಗ್ಯಾರಂಟಿ ಎಂಬ ಭೂತ ಬಿಟ್ಟಿದ್ದಾರೆ ಎಂದು ಹೇಳಿದರು ರಾಜ್ಯದಲ್ಲಿ ಶಿಕ್ಷಣ ಇಲಾಖೆ ಆದೋಗತಿಗೆ ಬಂದಿದೆ ಮಧು ಬಂಗಾರಪ್ಪನವರಿಗೆ ಸರಿಯಾಗಿ ಕನ್ನಡ ಓದಲು ಬರೆಯಲು ಬರುವುದಿಲ್ಲ ಅಂತವರಿಗೆ ಶಿಕ್ಷಣ ಇಲಾಖೆ ನೀಡಿದರೆ ಅಭಿವೃದ್ಧಿಯಾಗಲು ಹೇಗೆ ಸಾಧ್ಯ ಎಂದು ಈ ಸಂದರ್ಭದಲ್ಲಿ ಪ್ರಶ್ನಿಸಿದರು.
Views: 17