ಚಿತ್ರದುರ್ಗ:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ದಾಳಿಯನ್ನು ಖಂಡಿಸಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ದಾಳಿಯು ಕೇಂದ್ರ ಬಿಜೆಪಿ ಸರ್ಕಾರದ ರಾಜಕೀಯ ದ್ವೇಷದ ಷಡ್ಯಂತ್ರ ಎಂದು ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಅವರ ನೇತೃತ್ವದಲ್ಲಿ, ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯುದ್ದಕ್ಕೂ ಕೈ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಹಾಗೂ ಇ.ಡಿ ಇಲಾಖೆಯ ನಡೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಸತೀಶ್ ಜಾರಕಿಹೊಳಿ ಅವರ ಬೆಂಬಲಾರ್ಥವಾಗಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಈ ಪ್ರತಿಭಟನೆಯಲ್ಲಿ ಡಿಸಿಸಿ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ಲಕ್ಷ್ಮೀಕಾಂತ್, ಉಪಾಧ್ಯಕ್ಷ ರವಿಕುಮಾರ್, ಎಸ್.ಟಿ. ಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಶಿವಣ್ಣ ಗಂಜಿಗಟ್ಟೆ, ಒಬಿಸಿ ಘಟಕದ ಅಧ್ಯಕ್ಷ ಎನ್.ಡಿ. ಕುಮಾರ್ ಸೇರಿದಂತೆ ಮುನಿರಾ ಮುಕಾಂದರ್, ಮರುಳಾರಾಧ್ಯ, ಪ್ರಕಾಶ್, ನಾಗರಾಜ್ ಪೈಲಟ್ ಹಾಗೂ ಕುಮಾರ್ ಗೌಡ ಮತ್ತಿತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j