ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು : ಎಲ್ಲಾ ರಾಜ್ಯಗಳಲ್ಲಿ ಫಲಿತಾಂಶ ಕಾಂಗ್ರೆಸ್ ಪರ ಬರಲಿದೆ : ರಾಹುಲ್‌ ಗಾಂಧಿ

 

ನವದೆಹಲಿ, (ಮೇ.13) : ಬಿಜೆಪಿಯ ಬಂಡವಾಳಶಾಹಿ ವ್ಯವಸ್ಥೆಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಯಶಸ್ಸು ಜನರ ಯಶಸ್ಸು ಎಂದು ಬಣ್ಣಿಸಿದರು. ನವದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಕರ್ನಾಟಕ ಚುನಾವಣಾ ಫಲಿತಾಂಶಗಳ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಪ್ರೀತಿ ದ್ವೇಷವನ್ನು ಗೆದ್ದಿದೆ. ಇದು ಕೇವಲ ಕರ್ನಾಟಕ ಮಾತ್ರವಲ್ಲ ದೇಶದ ಎಲ್ಲ ರಾಜ್ಯಗಳಲ್ಲೂ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವು ಕರ್ನಾಟಕ ಚುನಾವಣೆಯಲ್ಲಿ ದ್ವೇಷದಿಂದಲ್ಲ, ಪ್ರೀತಿಯಿಂದ ಸ್ಪರ್ಧಿಸಿದ್ದೇವೆ. ಈ ಚುನಾವಣೆಯಲ್ಲಿ
ದ್ವೇಷದ ಅಂಗಡಿಯನ್ನು ಮುಚ್ಚಲಾಗಿದೆ‌ ಮತ್ತು ಪ್ರೀತಿಯ ಅಂಗಡಿಯನ್ನು ತೆರೆಯಲಾಗಿದೆ. ಬಡವರ ಶಕ್ತಿ ಬಂಡವಾಳಶಾಹಿಗಳ ದುರಹಂಕಾರವನ್ನು ಸೋಲಿಸಿದೆ.

ಭವಿಷ್ಯದಲ್ಲಿ ಎಲ್ಲಾ ರಾಜ್ಯಗಳಲ್ಲೂ ಇದು ಸಂಭವಿಸುತ್ತದೆ. ಕರ್ನಾಟಕ ಚುನಾವಣೆಯಲ್ಲಿ ಒಂದು ಕಡೆ ಕ್ರೂರ ಶಕ್ತಿ.. ಇನ್ನೊಂದು ಕಡೆ ಬಡವರಿದ್ದಾರೆ. ಕಾಂಗ್ರೆಸ್ ಪಕ್ಷ ಅವರ ಬೆಂಬಲಕ್ಕೆ ನಿಂತಿದೆ. ನಾನು ಕರ್ನಾಟಕದ ಜನತೆ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಅಭಿನಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

The post ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು : ಎಲ್ಲಾ ರಾಜ್ಯಗಳಲ್ಲಿ ಫಲಿತಾಂಶ ಕಾಂಗ್ರೆಸ್ ಪರ ಬರಲಿದೆ : ರಾಹುಲ್‌ ಗಾಂಧಿ first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/YeW5fdx
via IFTTT

Leave a Reply

Your email address will not be published. Required fields are marked *