ಮುನಿರತ್ನ ಕಾರಿನ ಮೇಲೆ ಕಲ್ಲಿನಿಂದ ದಾಳಿ; ಬಿಜೆಪಿ ಶಾಸಕನ ತಲೆಗೆ ಮೊಟ್ಟೆ ಹೊಡೆದ ಕಾಂಗ್ರೆಸ್ ಕಾರ್ಯಕರ್ತರು!

ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಮುನಿರತ್ನ (BJP MLA Munirathna) ಅವರ ಕಾರಿನ (Car) ಮೇಲೆ ದಾಳಿ ಮಾಡಲಾಗಿದ್ದು, ಮುನಿರತ್ನ ಮೇಲೆ ಮೊಟ್ಟೆ (Egg) ಹಾಗೂ ಕಲ್ಲು (Stone) ಎಸೆದಿರುವ ಘಟನೆ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ದಾಳಿ ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ತಲೆಗೆ ಮೊಟ್ಟೆ ಒಡೆದಿದ್ದಾರೆ.

ಮೊಟ್ಟೆ ಹೊಡೆದ ಬಳಿಕ ಶಾಸಕ ಮುನಿರತ್ನ ಅಲ್ಲಿಂದ ತೆರಳಿದ್ದು, ನಂತರ ಮುನಿರತ್ನ ಬೆಂಬಲಿಗರು ಹಾಗೂ ಕೈ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಲಗ್ಗೆರೆ ಸಮೀಪದ ಲಕ್ಷ್ಮಿದೇವಿನಗರದಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ

ಘಟನೆ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮತ್ತು ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಅವರು ಕಾರ್ಯಕ್ರಮಕ್ಕೆ ಬಂದ ಕೂಡಲೇ ಅವರ ಕಾರಿನತ್ತ ಮೊಟ್ಟೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ‌ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮುನಿರತ್ನ ಪ್ರತಿಭಟನೆ

ಮೊಟ್ಟೆ ಎಸೆತ ಬೆನ್ನಲ್ಲೇ ಶಾಸಕ ಮುನಿರತ್ನ ಅವರು ರಾಜ್ ಕುಮಾರ್ ಸಮಾಧಿ ಬಳಿ ಕುಳಿತು ಪ್ರತಿಭಟನೆ ನಡೆಸಿ ನಂತರ ತೆರಳಿದ್ದಾರೆ. ಘಟನೆ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮತ್ತು ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಅವರು ಕಾರ್ಯಕ್ರಮಕ್ಕೆ ಬಂದ ಕೂಡಲೇ ಅವರ ಕಾರಿನತ್ತ ಕಲ್ಲು ಎಸೆದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ‌ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಲಕ್ಷ್ಮೀ ದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ.




Leave a Reply

Your email address will not be published. Required fields are marked *