ಚಿತ್ರದುರ್ಗ ಡಿ. 01
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ರಾಜ್ಯದಲ್ಲಿ ರೈತರ ಸಮಸ್ಯೆಗಳು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಈ ನಡುವೆ ಅಧಿಕಾರ ಹಂಚಿಕೆ ಎಂಬ ವಿಷಯದಲ್ಲಿ ಜನರ ದಿಕ್ಕನ್ನು ತಪ್ಪಿಸಲು ಆಡಳಿತದಲ್ಲಿರುವವರು ಸಮಯವನ್ನು ವೈರ್ಥ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಹಲವಾರು ರೀತಿಯ ಸಮಸ್ಯೆಗಳು ಇದ್ದರೂ ಸಹಾ ಅವುಗಳ ನಿವಾರಣೆಗೆ ಸರ್ಕಾರ ಮುಂದಾಗದೆ ನಿದ್ದೆ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರು, ಮಾಜಿ ಸಚಿವರಾದ ಶ್ರೀರಾಮುಲು ಕಾಂಗ್ರೆಸ್ ಪಕ್ಷದ ವಿರುದ್ದ ವಾಗ್ದಾಳಿಯನ್ನು ನಡೆಸಿದರು.
ಭಾರತೀಯ ಜನತಾ ಪಾರ್ಟಿ ಜಿಲ್ಲಾ ರೈತ ಮೋರ್ಚಾವತಿಯಿಂದ ಚಿತ್ರದುರ್ಗದಲ್ಲಿ ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಇದು ಜನ ವಿರೋಧಿ ಸರ್ಕಾರವಾಗಿದೆ, ಜನರ ಸಮಸ್ಯೆಗಳು ಪರಿಹಾರಕ್ಕಿಂತ ಅವರಿಗೆ ಅಧಿಕಾರ ಉಳಿಸಿಕೊಳ್ಳುವ ಹಾಗೂ ಅಧಿಕಾರ ಹಿಡಿಯುವ ಆತುರದಲ್ಲಿ ಇದ್ದಾರೆ. ದಲಿತರಿಗೆ ಹೆಸರಿಗೆ ಮಾತ್ರ ಹಣವನ್ನು ಇಡಲಾಗಿದೆ ಆದ್ರೆ ಅದರಿಂದವರಿಗೆ ಯಾವ ಪ್ರಯೋಜವೂ ಆಗಿಲ್ಲ ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ.
ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ನಾಡಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಪರಿಹಾರ ನೀಡುತ್ತಿಲ್ಲ. ಬರದ ಸಂದರ್ಭದಲ್ಲಿ ರಾಜ್ಯ ಸರಕಾರ ಎಚ್ಚತ್ತುಕೊಂಡಿಲ್ಲ, ಅತಿವೃಷ್ಟಿ ಸಂದರ್ಭದಲ್ಲೂ ತಲೆ ಕೆಡಿಸಿಕೊಂಡಿಲ್ಲ, ಕಬ್ಬು ಬೆಳೆಗಾರರು ನಿರಂತರ ಹೋರಾಟ ಮಾಡಿದರೂ ಸ್ಪಂದಿಸಿಲ್ಲ, ಈಗ ಮೆಕ್ಕೆಜೋಳ ಬೆಳೆದ ರೈತರೂ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರ ಇನ್ನೂ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿಲ್ಲ. ಬೆಳೆಹಾನಿಗೆ ಪರಿಹಾರ ಘೋಷಿಸಿ ಒಂದೂವರೆ ತಿಂಗಳಾದರೂ ಪರಿಹಾರ ಕೊಡುವಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿಲ್ಲ.
ಶಾಸಕರಾದ ಡಾ.ಎಂ.ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತರ, ಕಾರ್ಮಿಕರ, ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಎಲ್ಲರು ಅಧಿಕಾರವನ್ನು ಹಿಡಿಯುವ ಬಗ್ಗೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ರಾಜ್ಯದ ಜನತೆಯ ಮೇಲೆ ಕಾಳಜಿ ಇಲ್ಲವಾಗಿದೆ, ಇಂತಹ ಸಮಯದಲ್ಲಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಮಾನತ್ತಿನಲ್ಲಿ ಇಟ್ಟು ಅವರ ಸಮಸ್ಯೆಗಳನ್ನು ಬಗೆಹರಿದ ನಂತರ ಅಧಿಕಾರವನ್ನು ನಡೆಸಲು ಅನುವು ಮಾಡಿಕೊಡಬೇಕಿದೆ. ಕಾಂಗ್ರೆಸ್ ಪಕ್ಷದ ಶಾಸಕರಾಗಲಿ, ಸಚಿವರಾಗಲಿ ಜನತೆಯ ಸಮಸ್ಯೆಯನ್ನು ಅಲಿಸುತ್ತಿಲ್ಲ, ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುತ್ತಿಲ್ಲ. ತಮಗೆ ಮತವನ್ನು ನೀಡಿದ ಮತದಾರರನ್ನು ನಿರ್ಲಕ್ಷ್ಯ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಸರ್ಕಾರವನ್ನು ಅಮಾನತ್ತಿನಲ್ಲಿ ಇಡುವುದು ಸೂಕ್ತವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಕ.ಎಸ್.ನವೀನ್ ಮಾತನಾಡಿ, ರಾಜ್ಯದ ಎಲ್ಲ ಸಮಸ್ಯೆಗೂ ಕೇಂದ್ರ ಸರ್ಕಾರದ ಕಡೆ ಬೆಟ್ಟು ತೋರಿಸುವುದು ಮತ್ತು ಪರಿಹಾರಕ್ಕಾಗಿ ಅವರ ಕಡೆ ಮುಖ ನೋಡುವುದಷ್ಟೇ ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರಕಾರ ಸೀಮಿತವಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರದ (ಬಿಎಸ್‍ವೈ) ಅವಧಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದ ಬೊಕ್ಕಸದಿಂದ ರೈತರಿಗೆ ನೀಡುತ್ತಿದ್ದ ವರ್ಷಕ್ಕೆ 4 ಸಾವಿರ ರೂಪಾಯಿಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿಲ್ಲಿಸಿರುವುದನ್ನು ರೈತ ಸಮುದಾಯದ ಪರವಾಗಿ ಖಂಡಿಸಿದ್ದು ರೈತರು ಬಳಸುವ ಕೃಷಿ ಸಲಕರಣೆಗಳನ್ನು ಸಬ್ಸಿಡಿ ದರದಲ್ಲಿ ನೀಡಲು ಹೆಚ್ಚು ಹಣ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದು ರಾಜ್ಯ ರೈತ ಮೋರ್ಚಾ ರೈತರ ಪರವಾಗಿ ಇದೆ ಅಧಿಕಾರ ಇರಲಿ ಇಲ್ಲದಿರಲಿ ನಮ್ಮ ಪಕ್ಷ ರೈತರ ಪರವಾಗಿ ಹೋರಾಟವನ್ನು ನಡೆಸಲಿದೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧವಾಗಿ ಹೋರಾಟವನ್ನು ಮಾಡಲಾಗುವುದು. ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಭಿಪ್ರಾಯವನ್ನು ಮೂಡಿಸಬೇಕಾಗಿದೆ ಸದನದ ಒಳಗೂ ಹೊರಗೂ ಸಹಾ ರೈತರ ಪರವಾಗಿ ಬಿಜೆಪಿ ಹೋರಾಟವನ್ನು ಮಾಡಲಿದೆ ಎಂದರು.
ಜಿಲ್ಲಾ ರೈತ ಮೋರ್ಚಾದ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಯಾದವ್ ಮಾತನಾಡಿ ರಾಜ್ಯದಲ್ಲಿ ಅಧಿಕಾರವನ್ನು ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅತಿವೃಷ್ಟಿಯಿಂದ ಮನೆಯಿಂದ ಹಾನಿಯಾದ ರೈತರ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮತ್ತು ಎನ್.ಡಿ.ಆರ್.ಎಫ್. ಎಸ್.ಡಿ.ಆರ್.ಎಫ್ ನಿಯಮಕ್ಕೆ ಅನುಸಾರವಾಗಿ ಪರಿಹಾರ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿದರು. ರಾಜ್ಯ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ನಗರದ ನೀಲಕಂಠೇಶ್ವರ ದೇವಾಲಯದಿಂದ ಒನಕೆ ಓಬವ್ವ ವೃತ್ತದವರೆಗೆ ಪಾದಯಾತ್ರೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮನವಿಯನ್ನು ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅಣಕು ಶವಯಾತ್ರೆಯನ್ನು ನಡೆಸಿ ಅದಕ್ಕೆ ಬೆಂಕಿಯನ್ನು ಹಚ್ಚಲಾಯಿತು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಮಾಜಿ ಅಧ್ಯಕ್ಷರಾದ ಎ.ಮುರಳಿ, ಮುಖಂಡರಾದ ಅನಿತ್ ಕುಮಾರ್, ಲಿಂಗಮೂರ್ತಿ, ಎನ್.ಆರ್.ಲಕ್ಷ್ಮೀಕಾಂತ್. ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜನ್, ರಾಜೇಶ್ ಬುರುಡೇಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಬಾಳೆಕಾಯಿ ರಾಮದಾಸ್, ಖಂಜಾಚಿ ಮಾಧುರಿ ಗೀರಿಶ್, ವಕ್ತರಾರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ಮಂಡಲ ಅಧ್ಯಕ್ಷರಾದ ಲೋಕೇಶ್ ನಾಗರಾಜ್, ಸುರೇಶ್ ಮಲ್ಲೇಶ್, ಅಣ್ಣಪ್ಪ, ಬೋಸೇರಂಗಪ್ಪ, ಓಬಳೇಶ್, ಕೊಲ್ಲಿಲಕ್ಷ್ಮೀ, ರೈತ ಮುಖಂಡರಾದ ಶಿವಲಿಂಗಪ್ಪ, ಪಾಪೇಶ್ ನಾಯಕ, ರಾಮರೆಡ್ಡಿ, ಸಿಂಧುತನಯ ದೊಡ್ಡಯ್ಯ, ರಂಗಸ್ವಾಮಿ, ಎಂಐಟಿ ಸ್ವಾಮಿ, ವಿಜಯಂದ್ರ, ಜೆ,ಬಿ,ರಾಜು, ಢಾ,ಮಂಜುನಾಥ್, ಬಸಮ್ಮ, ಜಗದಾಂಬ, ಲಕ್ಷ್ಮೀ, ರೇಖಾ, ವೀಣಾ, ಲೀಲಾವತಿ, ಸಿದ್ದಮ್ಮ, ರಜನಿ ಶಾಂತಮ್ಮ, ಸಿಂಧು ಯಶವಂತ, ಕಿರಣ ಕವಿತಾ ಸುಮಾ ಸೇರಿದಂತೆ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು, ಭಾಗವಹಿಸಿದ್ದರು.
Views: 17