ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಫೆ. 27 ಕಾಂಗ್ರೆಸ್‍ನ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ವಿಭಾಗದವತಿಯಿಂದ ಫೆ. 28 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಸಂವಿಧಾನ ರಕ್ಷಾ ಅಭಿಯಾನ ಕಾರ್ಯಕ್ರಮವನ್ನು
ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಯೋಜನಾ ಮತ್ತು ಸಾಂಖ್ಯಿಕ
ಸಚಿವರಾದ ಡಿ.ಸುಧಾಕರ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಡಾ. ಬಿ.ಆರ್.ಅಂಬೇಡ್ಕರ್
ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರುಗಳಾದ ರಘುಮೂರ್ತಿ, ಬಿ.ಜಿ,ಗೋವಿಂದಪ್ಪ, ಎನ್.ವೈ,ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ
ಡಿ.ಟಿ.ಶ್ರೀನಿವಾಸ್, ಅಬ್ದುಲ್ ಜಬ್ಬರ್ ಮಾಜಿ ಸಚಿವರಾದ ಹೆಚ್.ಅಂಜನೇಯ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಡಿಸಿಸಿ
ಅಧ್ಯಕ್ಷರಾದ ತಾಜ್‍ಪೀರ್, ಅದಿಜಾಂಭವ ಅಭೀವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ದ್ರಾಕ್ಷರಸ ಮಂಡಳಿ
ಅಧ್ಯಕ್ಷರಾದ ಯೋಗಿಶ್ ಬಾಬು, ಅಂಬೇಡ್ಕರ್ ನಿಗಮದ ಅಧ್ಯಕ್ಷರಾದ ಮುಂಡರಗಿ ನಾಗರಾಜ್, ಕಂಠೀರನ ಸ್ಟುಡಿಯೋ ಅಧ್ಯಕ್ಷರಾದ
ಮಹಬೂಬ್ ಪಾಷ, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಕೆಡಿಪಿ ಸದಸ್ಯರಾದ ಕೆ.ಸಿ.ನಾಗರಾಜ್, ಮಹಿಳಾ ಘಟಕದ ಅಧ್ಯಕ್ಷರಾದ
ಶ್ರೀಮತಿ ಗೀತಾ ನಂದಿನಿ ಗೌಡ, ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶಿವಣ್ಣ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ
ಎಂದು ವಿಭಾಗಗಳ ಅಧ್ಯಕ್ಷರುಗಳಾದ ಬಿ.ಮಂಜುನಾಥ್, ಎಸ್.ಜಯ್ಯಣ್ಣ, ಸೈಯದ್ ಖುದ್ದುಸ್ ಹಾಗೂ ಎನ್.ಡಿ.ಕುಮಾರ್
ತಿಳಿಸಿದ್ದಾರೆ.
Views: 0