ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ರೇಕ್​.,

ಬೆಂಗಳೂರು, ಮಾರ್ಚ್​ 11: ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ (Cotton Candy Ban) ಮಾಡಲಾಗಿದೆ. ಇನ್ನು ಗೋಬಿ ಮಂಚೂರಿಯ (Gobi manchurian) ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ (Minister Dinesh Gundurao)​ ಹೇಳಿದರು. 

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ಹಾಗೂ ಅಸಾಂಕ್ರಮಿಕ ಖಾಯಿಲೆ ಏರಿಕೆಯಾಗುತ್ತಿದೆ. ಸರಿಯಾದ ಆಹಾರ ತಯಾರು ಮಾಡದಿರುವುದು ಸಮಸ್ಯೆಗೆ ಕಾರಣವಾಗಿದೆ. ಹೆಚ್ಚು ಕೊಬ್ಬುಕಾರಕ, ಉಪ್ಪು ಹಾಗೂ ಸಕ್ಕರೆಯ ಆಹಾರ ಬಳಕೆಯಾಗುತ್ತಿದೆ. ಹೀಗಾಗಿ 171 ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ. ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದರಿಗಳು ಕಂಡು ಬಂದಿದೆ. ಟಾರ್ಟ್ರಾಜಿನ್, ಸನ್​ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್​ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ ಎಂದು ತಿಳಿಸಿದರು

​ರೊಡಮೈನ್ ಬಿ, ಟಾರ್ಟ್ರಾಜಿನ್​ ಬಳಸಿದರೆ 10 ಲಕ್ಷ ರೂ. ದಂಡ

ಇನ್ನು 25 ವಿಧದ ಕಾಟನ್​​ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. 15 ಮಾದರಿಗಳಲ್ಲಿ ಕೃತಕ ಬಣ್ಣ ಬಳಸಿರುವುದು ಕಂಡು ಬಂದಿದೆ. 10ರಲ್ಲಿ ಕೃತಕ ಬಣ್ಣ ಬಳಸಿಲ್ಲ. ಕೃತಕ ಬಣ್ಣ ಬಳಕೆ ಮಾಡಿ ಕ್ಯಾಂಡಿ ತಯಾರು ಮಾಡಬಹುದು. ಆದರೆ ರೊಡಮೈನ್ ಬಿ, ಟಾರ್ಟ್ರಾಜಿನ್​ನಂತಹ  ಯಾವುದೇ ಬಣ್ಣ ಬಳಸಬಾರದು. ಇದು ಆರೋಗ್ಯಕ್ಕೆ ಹಾನಿಕಾರಕ. ಇದು ಸಂಪೂರ್ಣ ಕಾನೂನು ಬಾಹಿರ. ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಇನ್ಮುಂದೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದರು.

ಗೋವಾದಲ್ಲಿ ಬ್ಯಾನ್​

ಗೋವಾದ ಜನಪ್ರಿಯ ತಿಂಡಿಯಾದ ಗೋಬಿ ಮಂಚೂರಿಯನ್ ಅನ್ನು ಸಿಂಥೆಟಿಕ್ ಬಣ್ಣಗಳು, ಸಂಶಯಾಸ್ಪದ ಗುಣಮಟ್ಟದ ಸಾಸ್‌ಗಳು ಮತ್ತು ರೀತಾ ಪೌಡರ್‌ನಿಂದ ತಯಾರಿಸಲಾಗುತ್ತದೆ ಎಂಬ ಕಾರಣ ನೀಡಿ ಗೋವಾದ ಮಾಪುಸಾ ನಗರದಲ್ಲಿ ಗೋಬಿ ಮಂಚೂರಿಯನ್ ನಿಷೇಧಿಸಲಾಗಿದೆ. ಗೋವಾದ ಮಾಪುಸಾ ನಗರದಲ್ಲಿನ ಅಂಗಡಿಗಳಲ್ಲಿ ಗೋಬಿ ಮಂಚೂರಿಯನ್ ಅನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶಿಸಿದೆ.

Source : https://tv9kannada.com/karnataka/health-department-banned-cotton-candy-and-use-of-artificial-colors-in-gobi-manchuri-in-karnataka-minister-dinesh-gundurao-vkb-796891.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *