

ಇಂದು ಐಪಿಎಲ್ನ 17 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಹಣಾಹಣಿ ನಡೆಯುತ್ತಿದೆ. ಇಂದು ಗೆದ್ದ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವ ಅವಕಾಶ ಹೊಂದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ, ಈ ಸೀಸನ್ ಎರಡನೇ ಪಂದ್ಯವನ್ನು ತನ್ನ ತವರು ಮೈದಾನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ (ಚೆಪಾಕ್) ಆಡುತ್ತಿದೆ. ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದ್ದ ಚೆನ್ನೈ ಇದುವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿದ್ದಾರೆ. ಮತ್ತೊಂದೆಡೆ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ಮೂರು ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿ ಮೊದಲ ಸ್ಥಾನದಲ್ಲಿದೆ.
Views: 0