Benefits Of Curry Leaves: ಆರೋಗ್ಯಕರ ಜೀವನ ನಡೆಸಲು ಆರೋಗ್ಯಕರ ಲಿವರ್ ಬಹಳ ಮುಖ್ಯ. ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಲಿವರ್‌ಗೆ ಹಾನಿಯಾಗುತ್ತದೆ. ಲಿವರ್ ಆರೋಗ್ಯವಾಗಿರಲು ಕರಿಬೇವಿನ ಎಲೆಗಳನ್ನು ಸೇವಿಸಬೇಕು.

Health Benefits Of Curry Leaves: ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಕರಿಬೇವಿಗೆ ವಿಶೇಷ ಸ್ಥಾನವಿದೆ. ರಿಬೇವು ಅಡುಗೆಯ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ನೀಡುತ್ತದೆ. ಕರಿಬೇವು ಎಲೆಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಪ್ರತಿದಿನ ಕರಿಬೇವಿನ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಕರಿಬೇವಿನ ಎಲೆಯಲ್ಲಿರುವ ಕಬ್ಬಿಣದ ಅಂಶವು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಕರಿಬೇವಿನ ಎಲೆಗಳು ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಇದು ಕೊಲೆಸ್ಟ್ರಾಲ್ ಕರಗಿಸಲು ಸಹಾಯ ಮಾಡುತ್ತದೆ ಮತ್ತು ಕೂದಲಿನ ಸಮಸ್ಯೆ ನಿವಾರಿಸುತ್ತದೆ. ಕರಿಬೇವಿನ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಪ್ರತಿದಿನ ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಸಂಪೂರ್ಣವಾಗಿ ಕಡಿಮೆ ಮಾಡಬಹುದು. ಇದು ರಕ್ತನಾಳಗಳಲ್ಲಿನ ಕೊಬ್ಬನ್ನು ಕರಗಿಸುತ್ತದೆ ಅಂತಾ ಆರೋಗ್ಯ ತಜ್ಞರು ಹೇಳಿದ್ದಾರೆ. ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರಲ್ಲಿ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಿದೆ. ಮಾರುಕಟ್ಟೆಯಲ್ಲಿ ಸಿಗುವ ಔಷಧಿಗಳಿಂದ ಕೊಲೆಸ್ಟ್ರಾಲ್ ನಿಯಂತ್ರಿಸಲು ಸಾಧ್ಯವಿಲ್ಲ. ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ನೆನೆಸಿದ ನೀರನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಕರಗುತ್ತದೆ.
ಕರಿಬೇವಿನ ಎಲೆಯಲ್ಲಿ ವಿಟಮಿನ್ ʼAʼ ಹೇರಳವಾಗಿದ್ದು, ಕಣ್ಣುಗಳನ್ನು ಆರೋಗ್ಯವಾಗಿಡಲು ಈ ವಿಟಮಿನ್ ಸಹಕಾರಿಯಾಗಿದೆ. ಕರಿಬೇವು ಸೊಪ್ಪಿನ ನೆನೆಸಿದ ನೀರನ್ನು ಕುಡಿಯುವುದರಿಂದ ಕಣ್ಣುಗಳು ಆರೋಗ್ಯವಾಗಿರುತ್ತವೆ. ನಿಯಮಿತವಾಗಿ ಕರಿಬೇವು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ ಮತ್ತುವಿವಿಧ ರೀತಿಯ ಕಣ್ಣಿನ ಸಮಸ್ಯೆಗಳಿಂದ ನಿಮಗೆ ಮುಕ್ತಿ ದೊರೆಯುತ್ತದೆ.
ಕರಿಬೇವಿನ ಎಲೆಗಳು ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಹಿಂದ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ. ಕರಿಬೇವಿನ ಎಲೆಗಳನ್ನು ಬಳಸುವುದರಿಂದ ಕೂದಲಿಗೆ ಪೋಷಣೆ ಸಿಗುತ್ತದೆ. ಕರಿಬೇವಿನ ಸೊಪ್ಪನ್ನು ನೀರಿನಲ್ಲಿ ನೆನೆಸಿಟ್ಟು ಪ್ರತಿದಿನ ಸೇವಿಸಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ. ದಪ್ಪ ಮತ್ತು ಕಪ್ಪು ಕೂದಲಿಗೆ ನಿಯಮಿತವಾಗಿ ಕರಿಬೇವು ಸೇವಿಸಬೇಕು.
ಆರೋಗ್ಯಕರ ಜೀವನ ನಡೆಸಲು ಆರೋಗ್ಯಕರ ಲಿವರ್ ಬಹಳ ಮುಖ್ಯ. ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಲಿವರ್‌ಗೆ ಹಾನಿಯಾಗುತ್ತದೆ. ಲಿವರ್ ಆರೋಗ್ಯವಾಗಿರಲು ಕರಿಬೇವಿನ ಎಲೆಗಳನ್ನು ಸೇವಿಸಬೇಕು. ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ಇವು ಯಕೃತ್ತಿನ ಹಾನಿಯನ್ನು ತಡೆಯುತ್ತದೆ. ಕರಿಬೇವಿನ ಎಲೆಗಳು ಯಕೃತ್ತನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ.
ನಿಯಮಿತವಾಗಿ ಕರಿಬೇವು ಸೇವಿಸುವುದರಿಂದ ಹೃದಯದ ಆರೋಗ್ಯಕ್ಕೆ ಸಹಕಾರಿ. ಇದರ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಕರಿಬೇವು ಸೇವನೆಯಿಂದ ಹೃದಯಕ್ಕೆ ಸಂಬಂಧಿಸಿ ಕಾಯಿಲೆಗಳಿಂದ ಮುಕ್ತಿ ದೊರೆಯುತ್ತದೆ.