ನಿತ್ಯ ಭವಿಷ್ಯ 18 ಅಕ್ಟೋಬರ್: ಇಂದು ಈ ರಾಶಿಯವರಿಗೆ ಮೋಹದ ಕಾರಣ ಬಹಳ ದುಃಖವಾಗಲಿದೆ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಆಶ್ವಯುಜ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಚಿತ್ರಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಶುಭ, ಕರಣ : ಕೌಲವ, ಸೂರ್ಯೋದಯ – 06 – 11 am, ಸೂರ್ಯಾಸ್ತ – 05 – 57 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:08 – 10:36, ಗುಳಿಕ ಕಾಲ 06:11 – 07:40, ಯಮಗಂಡ ಕಾಲ 13:33 – 15:51

ಮೇಷ ರಾಶಿ :

ಎಷ್ಟೇ ಒತ್ತಾಯ ಮಾಡಿದರೂ ಮನಸ್ಸಿಲ್ಲದ ಕಡೆ ಹೋಗಲಾರಿರಿ. ಗಟ್ಟಿಯಾದ ನಿಮ್ಮ ಮನಸ್ಸು ಇಂದು ಕರಗುವ ಸಂದರ್ಭವನ್ನು ದಿನಾಂತ್ಯದಲ್ಲಿ ಯಾರಾದರೂ ಮಾಡಿಯಾರು.‌ ಇಂದು ಮನೆಯ ಹಲವು ಕಾರ್ಯಗಳನ್ನು ಒಬ್ಬರೇ ಮಾಡಬೇಕಾಗುವುದು. ಆಕಸ್ಮಿಕವಾಗಿ ಅಲ್ಪ ಸಂಪತ್ತು ಬಂದರೂ ಅದು ನಷ್ಟವಾಗಿ ಹೋಗುವುದು. ದಾಂಪತ್ಯದಲ್ಲಿ ಒಲವು ಹೆಚ್ಚಾಗುವುದು. ತಾಳ್ಮೆಯನ್ನು ಕಳೆದುಕೊಳ್ಳುವಷ್ಟು ಕೋಪವು ಬೇಡ. ಹಲವು ಆದಾಯ ಮೂಲಗಳಲ್ಲಿ ಇಂದು ಒಂದು ಮಾತ್ರ ಉಳಿದುಕೊಳ್ಳುವುದು. ಸಂಗಾತಿಯ ಜೊತೆ ಸಲ್ಲಾಪವನ್ನು ಹೆಚ್ವು ಮಾಡುವಿರಿ. ಬಂಧುಗಳ ಜೊತೆ ಹಣಕಾಸಿನ ವ್ಯವಹಾರವನ್ನು ಮಾಡಬೇಕಾಗಿ ಬಂದರೆ ಪಾರದರ್ಶಕತೆಯೇ ಮುಖ್ಯವಾಗಿ ಇಟ್ಟುಕೊಳ್ಳಿ. ಏನನ್ನು ಕಳೆದುಕೊಳ್ಳುತ್ತಿದ್ದೇನೆ ಎಂಬ ಯೋಚನೆ ನಿಮಗಿರಲಿ. ನಿಮ್ಮ ಉದ್ಯಮವನ್ನು ನಿಲ್ಲಿಸುವ ಚಿಂತನೆ ಮಾಡುವಿರಿ. ನಿಮ್ಮ ಆರ್ಥಿಕತೆಯನ್ನು ಯಾರ ಜೊತೆಯೂ ಹಂಚಿಕೊಳ್ಳುವುದು ಬೇಡ.

ವೃಷಭ ರಾಶಿ :

ಆದಾಯದಲ್ಲಿ ಮಾಡುವ ಪಾಲಿನಿಂದ ಅರ್ಥವ್ಯವಸ್ಥೆ ಸುಧಾರಿಸುವುದು. ಏನಾದರೂ ಹೊಸ ಉತ್ಪನ್ನಗಳನ್ನು ನಿರ್ಮಾಣ‌ಮಾಡುವ ಆಸೆ ಬರುವುದು. ಇಂದು ಆತ್ಮವಿಶ್ವಾಸವು ಎಲ್ಲ ಕೆಲಸವೂ ಬೇಗ ಮುಗಿಯುವಂತೆ ಮಾಡುವುದು. ನಿಮ್ಮ ಮನಸ್ಸು ಕಿರಿಕಿರಿಯಿಂದ ಹೊರಬರಲು ಸಮಯವನ್ನು ತೆಗೆದುಕೊಳ್ಳುವುದು. ವಿದ್ಯಾರ್ಥಿಗಳು ತಮ್ಮ ನಿಶ್ಚಿತ ಗುರಿಯನ್ನು ಮುಟ್ಟಲು ಹೆಚ್ಚು ಶ್ರಮ ಹಾಗೂ ಸಮಯವನ್ನು ಕೊಡಬೇಕಾಗುವುದು. ಪ್ರಯಾಣವು ಸುಖಕರ ಎನಿಸದರೂ ಅನಂತರ ಅದರ ನೋವು ನಿಮಗೆ ಗೊತ್ತಾಗುವುದು. ಉದ್ಯೋಗದ ದಾಹ ನಿಮ್ಮನ್ನು ದಾರಿ ತಪ್ಪಿಸುವ ಸಾಧ್ಯತೆ ಇದೆ. ನೀವು ಇಂದು ಅಪರಿಚಿತ ವ್ಯಕ್ತಿಗಳ ನಡುವೆ ಇರುವಿರಿ. ಸಂಗಾತಿಯ ಮಾತುಗಳು ನಿಮಗೆ ಮನಸ್ಸಿಗೆ ನಾಟುವುದು. ಅಸಂಬದ್ಧ ಮಾತುಗಳನ್ನು ಕಡಿಮೆ ಮಾಡಿ. ಕೇಳಿದಷ್ಟಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಬದಲಾವಣೆ ಅನಿರೀಕ್ಷಿತಬಾದರೂ ಯೋಗ್ಯವೇ.

ಮಿಥುನ ರಾಶಿ :

ನಿರುದ್ಯೋಗಿಗಳಿಂದ ಉದ್ಯೋಗಕ್ಕೆ ಗಂಭೀರ ಹುಡುಕಾಟ. ಸಹೋದರ ಭಾವವನ್ನು ಇಟ್ಟುಕೊಂಡು ವರ್ತಿಸಿ. ಇಂದು ನಿಮ್ಮ ಮನಸ್ಸಿಗೆ ಬೇಕಾದ ವಿಶ್ರಾಂತಿಗೆ ಸ್ಥಳದ ಅನ್ವೇಷಣೆ ಮಾಡುವಿರಿ. ಹೂಡಿಕೆಯನ್ನು ಮಾಡುವ ವಿಚಾರವು ನಿಮ್ಮಲ್ಲಿ ಬಲವಾಗಿ ಇರುವುದು. ಅದೃಷ್ಟವು ಇಂದು ಕೈಕೊಡಬಹುದು. ಅಧಿಕ ಶ್ರಮವಿದ್ದರೂ ಫಲವು ಮಾತ್ರ ಅಲ್ಪವೇ ಸಿಗುವುದು. ದೂರ ಪ್ರಯಾಣದಿಂದ ಪ್ರಯಾಸವಾಗುವುದು. ಇಂದಿನ ನಿಮ್ಮ ಆಲೋಚನೆಗಳಿಗೆ ಹಲವರಿಂದ ಮಾನ್ಯತೆ ಪಡೆಯುವುದು. ದೃಷ್ಟಿ ದೋಷವು ಕಾಣಿಸಿಕೊಳ್ಳಬಹುದು. ಸ್ಥಾನಮಾನದ ಆಕಾಂಕ್ಷೆ ಅಧಿಕವಾಗುವುದು. ಹೆಚ್ಚಿನ ಉತ್ಸಾಹದಿಂದ ಇರುವ ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಸ್ನೇಹಸಂಬಂಧಗಳು ದೂರವಾಗಬಹುದು. ಕೃಷಿಯಲ್ಲಿ ಅಧಿಕ ಆದಾಯವನ್ನು ಪಡೆಯಬೇಕು ಎನ್ನಿಸುವುದು. ನೀರನಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಮಕ್ಕಳು ಕೇಳಿದರೆಂದು ಏನನ್ನಾದರೂ ಮಾಡುವುದು ಸರಿಯಾಗದು.

ಕರ್ಕಾಟಕ ರಾಶಿ :

ಒಡಹುಟ್ಟಿದವರೇ ವಿವಾದವನ್ನು ದೊಡ್ಡ ಮಾಡಬಹುದು. ಆಕಸ್ಮಿಕ ತೊಂದರೆಗಳನ್ನು ಎದುರಿಸುವ ಎದೆಗಾರಿಕೆ ಬೇಕು. ಇಂದು ನಿಮ್ಮ ಅಸತ್ಯದ ಮಾತು ಎಲ್ಲರಿಗೂ ತಿಳಿಯುವುದು. ಹಣದ ವಿಷಯದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ನಿಮಗೆ ಕಷ್ಟವೆನಿಸಬಹುದು. ನಿಮ್ಮವರನ್ನು ಅವಶ್ಯಕತೆಗಷ್ಟೇ ಬಳಸಿಕೊಳ್ಳುವಿರಿ. ರಮಣೀಯತೆಯು ನಿಮಗೆ ಇಷ್ಟವಾಗುವುದು. ನಿಮ್ಮ ಬಗ್ಗೆ ತಪ್ಪು ಕಲ್ಪನೆಗಳು ಮೂಡಲಿದ್ದು ಅದನ್ನು ಸರಿ ಮಾಡಿಕೊಳ್ಳಲು ಬಯಸುವಿರಿ. ಅನಗತ್ಯ ಕಾರ್ಯಗಳನ್ನು ಮಾಡಲು ಸಮಯವನ್ನು ಕೊಡುವ ಬದಲು ಸದುಪಯೋಗವಾಗುವಂತೆ ಇರಲಿ. ತುರ್ತು ಕಾರ್ಯದ ಕಾರಣಕ್ಕೆ ಪ್ರಯಾಣವನ್ನು ಮಾಡುವಿರಿ. ನೀವು ಆಡಿದ ಮಾತು ನಿಜವೇ ಆಗಿದ್ದರೂ ಕೂಡಲೇ ನಂಬುವುದು ಕಷ್ಟವಾದೀತು. ಕಲಾ‌ಕ್ಷೇತ್ರದವರಿಗೆ ಒಮ್ಮೆಲೆ ಒತ್ತಡ ಬರಲಿದ್ದು ನಿರ್ವಹಿಸುವುದು ಕಷ್ಟ. ದೈವ ಬಲವನ್ನು ನಂಬಿ ನೀವು ಕಾರ್ಯವನ್ನು ಮಾಡುವಿರಿ. ನಿಮ್ಮ ಸ್ವಂತ ಕೆಲಸಕ್ಕಾಗಿ ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರುವಿರಿ. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು.

ಸಿಂಹ ರಾಶಿ :

ಬಂದ ಹಣವು ವಿಳಂಬವಾದರೂ ಬೇಕಾದ ಸಮಯಕ್ಕೇ ಸಿಗಲಿದೆ. ಇಂದಿನ ದಿನವನ್ನು ಒಳ್ಳೆಯ ದಿನವನ್ನಾಗಿ ಮಾಡಿಕೊಳ್ಳಬಹುದು. ಇಂದು ಮಾಡಬೇಕಾದುದನ್ನು ಮಾಡಿ. ಅನಂತರ ಕೊರಗುತ್ತ ಇರುವುದು ಬೇಡ. ತಂದೆಯ ವಿಚಾರದಲ್ಲಿ ನಿಮಗೆ ಅಸಮಾಧನ ಇರಲಿದ್ದು ಅವರ ಮೇಲೆ ಕೋಪಗೊಳ್ಳುವಿರಿ. ನಿಮ್ಮ ತನವನ್ನು ಬಿಟ್ಟು ನೀವು ಹೊಂದಾಣಿಕೆಯನ್ನು ಮಾಡಿಕೊಳ್ಳಲಾರಿರಿ. ಯಾರ ಸಹಾಯವನ್ನೂ ಪಡೆಯದೆ ನೀವು ನಿಮ್ಮ ಕಾರ್ಯವನ್ನು ನಿಧಾನವಾಗಿಯೇ ಮಾಡುವಿರಿ. ಶುಭ ಸಮಾರಂಭಗಳಿಗೆ ಭೇಟಿ ಮಾಡುವ ಸಂದರ್ಭವು ಬರಬಹುದು. ಸಾಮಾಜಿಕ ಚಟುವಟಿಕೆಗಳನ್ನು ಮಾಡಲು ಆಸಕ್ತಿಯು ಇರದು. ಸರಿಯಾದ ವ್ಯವಸ್ಥೆಯನ್ನು ಹಾಳುಮಾಡಿಕೊಳ್ಳುವಿರಿ. ನಿರುದ್ಯೋಗಿಗಳು ಉದ್ಯೋಗದ ಅನ್ವೇಷಣೆಯನ್ನು ಮಾಡುವರು. ನಿಮ್ಮದಾದ ಕೆಲವು ವಿಚಾರಗಳನ್ನು ಅನ್ಯರ ಮೇಲೆ ಹೇರುವಿರಿ. ಅಮೂಲ್ಯ ವಸ್ತುವೊಂದು ಕಣ್ಮರೆಯಾಗಬಹುದು. ಅನೌಪಚಾರಿಕವಾಗಿ ಅಧಿಕಾರಿಗಳ ಜೊತೆ ನಡೆದುಕೊಳ್ಳುವಿರಿ.

ಕನ್ಯಾ ರಾಶಿ :

ಇಂದು ನೀವು ಇಚ್ಛಿಸಿದ ಕಡೆಗೆ ನಿಮಗೆ ಹೋಗಲಾಗದು. ಬೇಸರವನ್ನೂ ಕಳೆದುಕೊಳ್ಳಲಾಗದು. ಸಕಾರಾತ್ಮಕ ಯೋಚನೆಯೇ ಬಂಧನವನ್ನು ಗಟ್ಟಿಯಾಗಿಸುವುದು. ಪ್ರಶಂಸೆಯಿಂದ ನೀವು ಸಂತೋಷಗೊಳ್ಳುವಿರಿ. ಮಾನಸಿಕವಾಗಿ ಸಬಲರಾಗುವ ಅವಶ್ಯಕತೆ ಇರಲಿದೆ‌. ಸ್ವಂತ ಉದ್ಯಮವನ್ನು ಮಾಡುತ್ತಿದ್ದರಿಗೆ ನಿರೀಕ್ಷಿತ ಲಾಭದ ಮಟ್ಟವನ್ನು ತಲುಪುವುದು ಕಷ್ಟವಾಗುವುದು. ಸ್ತ್ರೀಯರ ಜೊತೆ ನಿಮ್ಮ ವ್ಯವಹಾರವು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ಸಂಸಾರದ ಹೊಣೆಗಾರಿಕೆಯನ್ನು ಕಷ್ಟದಿಂದ ನಿರ್ವಹಿಸುವಿರಿ. ವೃತ್ತಿಯ ಸ್ಥಳದಲ್ಲಿ ನಿಮಗೆ ಸಿಟ್ಟು ತರಿಸುವ ಸಂಗತಿಗಳು ನಡೆಯಬಹುದು. ಪಿತ್ರಾರ್ಜಿತ ಆಸ್ತಿಯು ನಿಮ್ಮ ಕೈ ಸೇರುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ವಿಷಯಕ್ಕೆ ತಯಾರಿ ಆರಂಭವಾಗಲಿದೆ. ತಾಳ್ಮೆಯನ್ನು ಇಟ್ಟುಕೊಳ್ಳುವುದು ಅಗತ್ಯವಾಗಬಹುದು. ಸಮಯ ಸರಿದಾಗ ಎಲ್ಲವೂ ಅರಿವಾಗುವುದು. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ವಾಹನ ಖರೀದಿಯಿಂದ ನಿಮಗೆ ಚಿಂತೆ ಆರಂಭವಾಗುವುದು.

ತುಲಾ ರಾಶಿ :

ವಿಶೇಷ ಭತ್ಯೆಯು ಖಾಸಗಿ ವಲಯದಲ್ಲಿ ನಿಮಗೆ ಸಿಗುವುದು. ನಿಮ್ಮ ಸಹಾಯವು ಕೆಲವರ‌ ಸಂತೋಷಕ್ಕೆ ಕಾರಣವಾಗುವುದು. ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಇಂದು ಕಸಿದುಕೊಳ್ಳಬಹುದು. ನಿಮ್ಮ ಕಡೆಗಣಿಸುತ್ತಿರುವುದು ನಿಮಗೆ ಗೊತ್ತಾಗಿ ಬೇಸರವಾಗುವುದು. ಸ್ನೇಹಿತರಿಂದ ನೀವು ಸಹಾಯವನ್ನು ಬಯಸುವಿರಿ. ಕಛೇರಿಯ ಕೆಲಸಕ್ಕಾಗಿ ಓಡಾಟವು ಇರಲಿದೆ. ದಾಂಪತ್ಯದ ಸಾಮರಸ್ಯವನ್ನು ನೀವು ಉಳಿಸಿಕೊಳ್ಳಿ. ನಿಮ್ಮದಲ್ಲದ ಕೆಲಸವು ನಿಮಗೇ ಬರಬಹುದು. ಮನೋರಂಜನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಹೋದ್ಯೋಗಿಗಳ ಸಹವಾಸದಿಂದ ಕೆಟ್ಟ ಅಭ್ಯಾಸವನ್ನು ಕಲಿಯುವಿರಿ. ಹೂಡಿಕೆಗೆ ಬೇರೆ ಕೆಲವು ದಾರಿಗಳನ್ನು ಕಂಡುಕೊಳ್ಳಬಹುದು. ಓದಿನಲ್ಲಿ ಏಕಾಗ್ರತೆಯ ಕೊರತೆ ಕಾಣಲಿದೆ.‌ ತಂದೆಯ ಜೊತೆ ಕಲಹವಾಗಿ ಮನೆಯಿಂದ ದೂರವಿರುವಿರಿ. ನಿಮ್ಮ ಮಾತುಗಳು ಕೆಲವರಿಗೆ ಇಷ್ಟವಾಗದೇ ಹೋಗುವುದು. ಪ್ರೇಮವನ್ನು ನಿಭಾಯಿಸುವುದು ಕಷ್ಟವಾಗುವುದು. ಪ್ರಿಯವಾದ ವಸ್ತುವನ್ನು ಪಡೆಯಲು ಹಣದ ಅಭಾವವಿರುವುದು.

ವೃಶ್ಚಿಕ ರಾಶಿ :

ಉದ್ಯಮಿಗಳು ಹಾಗೂ ನೌಕರರಿಗೂ ನಡುವೆ ಮನಸ್ತಾಪ ಅಧಿಕವಾಗುವುದು. ಒಳ್ಳೆಯ ಕಾರ್ಯಗಳು ನಿಮ್ಮನ್ನು ಕಾಪಾಡಬಹುದು. ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ನಿಮಗೆ ಸಿಗಲಿದೆ. ಅಧಿಕಾರದಿಂದ ನಿಮ್ಮ ವರ್ತನೆಯು ಬದಲಾಗಬಹುದು. ನೌಕರರ ಬಗ್ಗೆ ನಿಮಗೆ ಅಸಮಾಧಾನ ಇರುವುದು. ಸಂತೋಷವನ್ನು ನೀವು ಹಂಚಿಕೊಳ್ಳುವಿರಿ. ನಿಮ್ಮ ಕಾರ್ಯಸಾಧನೆಗೆ ಯಾರನ್ನಾದರೂ ಬಳಸಿಕೊಳ್ಳುವಿರಿ. ನಿಮ್ಮ ಕೆಲಸಗಳಿಗೆ ನಿಗದಿತ ಸಮಯವನ್ನು ಕೊಡುವುದು ಮುಖ್ಯವಾಗಬಹುದು. ಆಯ್ಕೆಗಳು ನಿಮ್ಮನ್ನು ಗೊಂದಲಕ್ಕೆ ದೂಡಬಹುದು. ಖರೀದಿಸಿದ ಭೂಮಿಯನ್ನು ಆರ್ಥಿಕ ಹೊರೆಯ ಕಾರಣಕ್ಕೆ ಮಾರುವಿರಿ. ಸಂಗಾತಿಯ ವರ್ತನೆಯ ಬಗ್ಗೆ ನಿಮಗೆ ಹೆಚ್ಚು ಬೇಸರವಾಗಬಹುದು. ಹಣದ ವಿಚಾರವನ್ನು ಇಂದು ಹೆಚ್ಚು ಮಾಡುವಿರಿ. ಧಾರ್ಮಿಕ ಆಚರಣೆಯಲ್ಲಿ ಸ್ವಲ್ಪ ತೊಡಗುವಿರಿ. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.‌ ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರಬೇಕಾಗುವುದು.

ಧನು ರಾಶಿ :

ಸಹೋದ್ಯೋಗಿಗೆ ಗೊತ್ತಿಲ್ಲದೇ ಅಸಂಬದ್ಧ ಮಾಹಿತಿಯನ್ನು ಕೊಡುವಿರಿ. ಆಂತರಿಕ ಹಿರಿತನವನ್ನು ಉಳಿಸಿಕೊಳ್ಳುವಂತೆ ನಡೆದುಕೊಳ್ಳಬೇಕು. ಇಂದು ಸಹಾಯ ಮಾಡುವ ನಿಮ್ಮ ನಿರಂತರ ಅಭ್ಯಾಸಕ್ಕೆ ನಿಮಗೆ ದಣಿವಾಗಬಹುದು. ನಿಮ್ಮ ಉದ್ಯೋಗವು ಗೋಡೆಯ ಮೇಲಿರುವ ದೀಪದಂತೆ ಇರುವುದು. ನಿಮ್ಮ ಸಾಮಾಜಿಕ ಕಾರ್ಯದಲ್ಲಿ ತೊಡಕುಗಳು ಬರಬಹುದು. ಆರೋಗ್ಯದ ಸಮಸ್ಯೆಯು ಗಂಭೀರವಾಗಿ ಇರಲಿದೆ. ನಿಮ್ಮ ಇಷ್ಟದವರ ಭೇಟಯಿಂದ ಖುಷಿಯು ಹೆಚ್ಚಾಗಲಿದೆ. ಕಡಿಮೆ ಖರ್ಚಿದ್ದರೂ ದೈಹಿಕ ಶ್ರಮವು ಹೆಚ್ಚಾಗುವುದು. ಸರ್ಕಾರಿ ಉದ್ಯೋಗವನ್ನು ಮಾಡುತ್ತಿದ್ದರೆ ಒತ್ತಡವು ನಿಮಗೆ ಅಧಿಕವಾಗಲಿದೆ. ಆಸ್ತಿಯನ್ನು ನಿಮ್ಮದಾಗಿಸಿಕೊಳ್ಳಲು ಹೆಚ್ಚು ಹಣವನ್ನು ಖರ್ಚುಮಾಡುವಿರಿ. ಸೋಮಾರಿತನದ ವಿಳಂಬ ಮಾಡುವುದು ಬೇಡ. ದುಸ್ಸಾಧ್ಯವಾದ ಕೆಲಸಗಳಿಗೆ ನೀವು ಪ್ರಯತ್ನಶೀಲರಾಗುವುದು ಬೇಡ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು. ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು.

ಮಕರ ರಾಶಿ :

ಸಮಯ ಪಾಲನೆಗೆ ಕೊಡುವ ಮಹತ್ತ್ವಕ್ಕೆ ಸೂಕ್ತ ಬಹುಮಾನ. ಇಂದಿನ ನಿಮ್ಮ‌ ತೀರ್ಮಾನವು ಯೋಗ್ಯವಾಗಿ ಇರುವುದು. ನೀವು ಇಂದು ಅನಗತ್ಯ ವಾದಗಳಿಗೆ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುವದರ ಜೊತೆ ಹೆಸರೂ ಹಾಳಾಗುವುದು. ನಿಮಗೆ ಅಸಾಧ್ಯ ಎಂದು ಗೊತ್ತಿದ್ದರೂ ಬೇರೆಯವರ ಒತ್ತಾಯಕ್ಕೆ ಕೆಲಸವನ್ನು ಮಾಡುವಿರಿ. ನಿಮ್ಮ ನೈಜ‌ಸ್ವಭಾವವು ನಿಮಗೆ ತಿಳಿಯಲಿದೆ. ನಿಮ್ಮ ಅಭಿಪ್ರಾಯವನ್ನು ತಿಳಿಸಲು ನಿಮಗೆ ಯಾವ‌ ಅಡ್ಡಿಯೂ ಇರುವುದಿಲ್ಲ. ಕುಟುಂಬದ ಜೊತೆ ಸಮಯವನ್ನು ಕಳೆಯಲು ಇಚ್ಛಿಸಿದರೂ ಕೆಲಸಕ್ಕೆ ತೆರಳಬೇಕಾದ ಸ್ಥಿತಿ ಇರುವುದು. ಆದಾಯ ಮೂಲದ ಬಗ್ಗೆ ನಿಮಗೆ ಅಸಮಾಧನವು ಇರಲಿದೆ. ಆಕ್ರಮಣಕಾರಿ ಭಾಷಣದಿಂದ ತೊಂದರೆಗೆ ಸಿಕ್ಕಿಬೀಳುವಿರಿ. ವಿದ್ಯಾಭ್ಯಾಸದಲ್ಲಿ ನೀವು ಅಂದುಕೊಂಡಂತೆ ಆಗದು. ಯಾರದೋ ವಿಚಾರಕ್ಕೆ ನೀವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ನಿದ್ರೆಯಲ್ಲಿ ದುಃಸ್ವಪ್ನಗಳು ನಿಮ್ಮ ಆಲೋಚನೆಯ ದಿಕ್ಕನ್ನು ತಪ್ಪಿಸಬಹುದು. ಸಂಗಾತಿಯ ಜೊತೆ ವಿಹಾರವನ್ನು ಮಾಡುವಿರಿ.

ಕುಂಭ ರಾಶಿ :

ದೈಹಿಕ ಸಮಸ್ಯೆಗೆ ಪರಿಹಾರ ಗೊತ್ತಾಗಲಿದೆ. ಇಂದು ನಿಮ್ಮ ಉದಾರತೆಯು ಖರ್ಚಿನಿಂದ ಆರಂಭವಾಗುವುದು. ಇಂದು ಖರೀದಿಸಬೇಕಾದ ವಸ್ತಗಳು ಬಹಳ ಇರಲಿವೆ. ಭವಿಷ್ಯದ ಬಗ್ಗೆ ನಿಮಗೆ ಕೆಲವರು ಮಾರ್ಗದರ್ಶನ ಮಾಡಬಹುದು. ಒತ್ತಡವನ್ನು ನೀವಾಗಿಯೇ ತಂದುಕೊಳ್ಳಲಿದ್ದೀರಿ. ಉದ್ಯೋಗಕ್ಕೆ ಹತ್ತಾರು ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮರಿಗೆ ನೀವು ಬೆಲೆಯನ್ನು ಕೊಡುವಿರಿ. ಕಣ್ತಪ್ಪಿನ ದೋಷದಿಂದ ಎಚ್ಚರಿಕೆಯಿಂದ ಇರಬೇಕು. ಸಾಧ್ಯವಾದಷ್ಟು ಎಲ್ಲರ ಜೊತೆ ಬೆರೆಯುವ ಮನಃಸ್ಥಿತಿಯನ್ನು ಇಟ್ಟುಕೊಳ್ಳಿ. ನಿಮ್ಮ ಮೂಗಿನ ನೇರಕ್ಕೆ ಆಗಬೇಕು ಎಲ್ಲವು ಎಂಬ ಧೋರಣೆ ಸರಿಯಾಗದು. ಪರಿಣಾಮಕಾರಿಯಾದ ಯೋಜನೆಯನ್ನು ಸಫಲಗೊಳಿಸುವಿರಿ. ಸ್ವೇಚ್ಛೆಯಿಂದ ಇಂದಿನ ದಿನವನ್ನು ಕಳೆಯುವಿರಿ. ಅವಶ್ಯಕತೆ ಇರುವ ವಸ್ತುಗಳನ್ನು ಯಾರಿಂದಲೂ ಕೇಳಿ ಪಡೆಯಲಾರಿರಿ. ಮಕ್ಕಳ ಮಾತುಗಳು ನಿಮಗೆ ಹಾಸ್ಯದಂತೆ ಕಾಣಿಸುವುದು. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಚುಚ್ಚಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ.

ಮೀನ ರಾಶಿ :

ಪ್ರಯಾಣದಲ್ಲಿ ಉಂಟಾದ ತಡೆಗೆ ಅನ್ಯ ಮಾರ್ಗವನ್ನು ಆಶ್ರಯಿಸುವಿರಿ. ನಿಮ್ಮ ದಕ್ಷತೆಗೆ ಗೌರವ ಸಿಗಲಿದೆ. ಇಂದು ನಿಮ್ಮ ಸಂತೋಷದ ಕ್ಷಣಗಳನ್ನು ನೀವೇ ಸೃಷ್ಟಿಸಿಕೊಳ್ಳುವಿರಿ. ಕಲೆಯಲ್ಲಿ ಅಭಿರುಚಿಯು ಹೆಚ್ಚಾಗುವುದು. ಹಣಕಾಸಿನ ವಿಚಾರದಲ್ಲಿ ಎಲ್ಲವೂ ಸರಿಯಿದ್ದರೂ ನೆಮ್ಮದಿಯು ಸರಿಯಾಗಿರದು. ನಿಮ್ಮ ವರ್ತನೆಯನ್ನು ಕೈ ಮಾಡಿ ತೋರಿಸಬಹುದು. ಅತಿಯಾದ ಮಾತು ಇತರರಿಗೆ ತೊಂದರೆ ಕೊಡಬಹುದು. ಹಿತಶತ್ರುಗಳ ಪೀಡೆಯು ಉತ್ಸಾಹವು ಕುಗ್ಗಿಸಬಹುದು ಅಥವಾ ಅನ್ಯ ಕೆಲಸಗಳನ್ನು ಮಾಡಲು ಅವಕಾಶಗಳನ್ನು ಕೊಡದೇ ಹೋಗಬಹುದು. ನಿಮ್ಮಲ್ಲಿ ಸಕಾರಾತ್ಮಕ ಬದಲಾವಣೆಯಾಗಲಿದೆ. ನಷ್ಟವನ್ನು ಭರಿಸಿಕೊಳ್ಳಲಾಗದು. ಬರಹಗಾರರಿಗೆ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಬಹುದು. ಯಾವ ವಿಚಾರಗಳಿಗೂ ಅತಿಯಾದ ಚಿಂತೆಯ ಅವಶ್ಯಕತೆ ಇರದು. ನಂಬಿಕೆ ಇಡುವುದಾದರೆ ಪೂರ್ಣವಾಗಿ ಇಡಿ. ಆದಾಯದ ಮೂಲಗಳನ್ನು ನೀವು ಉಳಿಸಿಕೊಳ್ಳುವುದು ಕಷ್ಟವಾದೀತು.

Views: 47

Leave a Reply

Your email address will not be published. Required fields are marked *