ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮಾ. 11
ಶಾಮನೂರು ಶಿವಶಂಕರಪ್ಪರವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾ ವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ಪಕ್ಷ ಹೈಕಮಾಂಡನ್ನು ಆಗ್ರಹಿಸಿದೆ.
ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾದ ಸೈಯದ್ ಖುದ್ದುಸ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವು ವೈವಿಧ್ಯಮಯ ಸಮುದಾಯಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಇಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾ ರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಕಳೆದ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ನಂಬಿ, ಪಕ್ಷದ ಬಲವರ್ಧನೆಗಾಗಿ ಶ್ರಮಿಸುತ್ತಿರುವ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರಾದ ಹಾಲಿ ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬರ್ ಕ್ಷೇತ್ರದಾದ್ಯಂತ ಅಪಾರ ಜನಪ್ರಿಯತೆ ಹೊಂದಿದ್ದಾರೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಹಾಲಿ ವಿಧಾನ ಪರಿಷತ್ ಸದಸ್ಯರಾಗಿ ಅವರಿಗೆ ಶಾಸಕಾಂಗದ ಕೆಲಸ ಕಾರ್ಯಗಳ ಬಗ್ಗೆ ಅಪಾರ ಅನುಭವವಿದ್ದು, ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಬಗೆಹರಿಸುವ ಸಾಮಥ್ರ್ಯ ಹೊಂದಿದ್ದಾರೆ. ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರುವ ಇವರು, ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಅತ್ಯಂತ ನಿಷ್ಠೆಯಿಂದ ನಿಭಾಯಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲದೆ, ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯದ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸರ್ವರನ್ನೂ ಒಗ್ಗೂಡಿಸಿಕೊಂಡು ಹೋಗುವ ಚಾಕಚಕ್ಯತೆ ಹೊಂದಿದ್ದಾರೆ ಎಂದಿದ್ದಾರೆ ಎಂದು ಸೈಯದ್ ಖುದ್ದುಸ್ ತಿಳಿಸಿದರು.
ಕ್ಷೇತ್ರದಲ್ಲಿ ನಿರಂತರವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಬಡವರ ಮತ್ತು ಶೋಷಿತರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ರಾಜಕೀಯ ಸಮೀಕರಣಗಳ ಪ್ರಕಾರ, ಈ ಬಾರಿ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ಅಭ್ಯರ್ಥಿಗೆ ಅವಕಾಶ ನೀಡಿದರೆ ಪಕ್ಷದ ಗೆಲುವು ಸುಲಭವಾಗಲಿದೆ ಎಂಬುದು ಕಾರಣಕ್ಕೆ ಕಾರ್ಯಕರ್ತರ ದೃಢ ವಿಶ್ವಾಸವಾಗಿದೆ. ಆದ್ದುರಿಂದ, ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿ ಮತ್ತು ಪಕ್ಷದ ಹಿತದೃಷ್ಟಿಯಿಂದ, ಮುಂಬರುವ ಚುನಾವಣೆಯಲ್ಲಿ ಅಬ್ದುಲ್ ಜಬ್ಬರ್ ಅವರಿಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕೆಂದು ಪಕ್ಷದ ಹೈಕಮಾಂಡ್‍ನಲ್ಲಿ ಮನವಿ ಮಾಡಿದರು.
ಕ್ಷಮೆಗೆ ಆಗ್ರಹ : ಸಚಿವರಾದ ಬಿ.ಝಡ್. ಜಮೀರ್‍ಅಹ್ಮದ್‍ಖಾನ್‍ರವರು ಒಬ್ಬ ಮುಸ್ಲಿಂ ಸಮುದಾಯದ ರಾಷ್ಟ್ರ ನಾಯಕರಾಗಿದ್ದು ಮುಸ್ಲಿಂ ಹಾಗೂ ಅಹಿಂದ ವರ್ಗಕ್ಕೆ ಬಹಳಷ್ಟು ಕೊಡುಗೆ ಕೊಟ್ಟಿದ್ದು ಇವರ ಅಧ್ಯಕ್ಷತೆಯಲ್ಲಿ ಬಹಳಷ್ಟು ಚುನಾವಣೆ ಗೆದ್ದಿದ್ದು ಇತಿಹಾಸವಿದೆ ಹಾಗೂ ಅಲ್ಪಸಂಖ್ಯಾತರಿಗೆ ಧ್ವನಿಯಾಗಿದ್ದಾರೆ ಹಾಗಾಗಿ ಮುಸ್ಲಿಮರಿಗೆ ಟಿಕೆಟ್‍ಗಾಗಿ ಮಾತನಾಡಿದ್ದಾರೆ ಇದನ್ನು ತಪ್ಪಾಗಿ ತಿಳಿದುಕೊಂಡು ದಾವಣಗೆರೆಯ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿರುವುದು ತಪ್ಪು ಇವರ ಮಾತುಗಳು ಮುಸ್ಲಿಂ ಸಮುದಾಯಕ್ಕೆ ಧಕ್ಕೆ ತಂದಿದೆ ಮುಸ್ಲಿಂ ಸಮುದಾಯವು ಕಳೆದ 50 ವರ್ಷಗಳಿಂದ ಇವರ ಕುಟುಂಬಕ್ಕೆ ರಾಜಕೀಯದಲ್ಲಿ ಬೆನ್ನೆಲುಬುವಾಗಿ ನಿಂತಿದ್ದು ಇವರಿಗೆ ಗೊತ್ತಿಲ್ಲವೇ. ಎಸ್ ಎಸ್ ಮಲ್ಲಿಕಾರ್ಜುನ್ ವೀರಶೈವ ಸಮುದಾಯದ ವ್ಯಕ್ತಿಗಳಿಗೆ ಟಿಕೆಟ್ ಕೇಳುವುದಿಲ್ಲವೇ ಇವರು ಕೂಡ ಒಬ್ಬ ಸಮುದಾಯದ ಮುಖಂಡರಲ್ಲವೇ ಇವರು ಈ ಮಾತನಾಡಿದ್ದು ಇವರಿಗೆ ಶೋಭಾ ತರುವುದೇ ಹಾಗಾಗಿ ಮುಖಂಡರಾದ ಜಮೀರ್ ಅಹ್ಮದ್‍ಖಾನ್ ರವರಿಗೆ ಕ್ಷಮೆ ಕೇಳಬೇಕು ಎಂದು ಸೈಯದ್ ಖುದ್ದುಸ್ ಆಗ್ರಹಿಸಿದರು.
ದಿವಂಗತ ಶಾಮನೂರು ಶಿವಶಂಕರಪ್ಪ ರವರು ಇದ್ದಾಗಲೇ ಮುಸ್ಲಿಮರಿಗೆ ಮುಂದಿನ ಭಾರಿ ನಿಮಗೆ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಸಿಗುವುದು ಯಾವಾಗ ಕುಟುಂಬ ರಾಜಕಾರಣ ನಿಲ್ಲಿಸಬೇಕು ಎಂದ ಅವರು ಕಾಂಗ್ರೆಸ್ಸಿನ ಟಿಕೆಟ್ ಕೊಡುವುದು ಬಿಡುವುದು ಹೈಕಮಾಂಡ್‍ಗೆ ಸೇರಿದ್ದು ನಮಗೆ ಕೂಡುವಂತೆ ಒತ್ತಾಯವನ್ನು ಮಾಡುತ್ತಿದ್ದೇವೆ ಎಂದು ಗೋಷ್ಟಿಯಲ್ಲಿ ಜಿಲ್ಲಾ ಕಾರ್ಮಿಕ ಅಧ್ಯಕ್ಷ ಮೋಹಿದ್ದುನ್ ಚೋಟು, ಜಿಲ್ಲಾ ಅಲ್ಪಸಂಖ್ಯಾತ ಉಪಾಧ್ಯಕ್ಷರಾದ ಡಾ ರೆಹಮತ್ತುಲ್ಲಾ, ಪ್ರಧಾನ ಕಾರ್ಯದರ್ಶಿ ಉಸ್ಮಾನ್, ಪ್ರಧಾನ ಕಾರ್ಯದರ್ಶಿ ಸಿರಾಜ್ ಈ ಸಂದರ್ಭದಲ್ಲಿ ಭಾಗಿಯಾಗಿದ್ದರು