
DC vs GG Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಗುಜರಾತ್ ಜೈಂಟ್ಸ್ (Gujarat Gaints) ತಂಡಗಳು ಮುಖಾಮುಖಿಯಾಗಲಿದೆ. ಈಗಾಗಲೇ 8 ಪಾಯಿಂಟ್ ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಮುಂದಿನ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಬಹುದು. ಮತ್ತೊಂದೆಡೆ ಗುಜರಾತ್ ಜೈಂಟ್ಸ್ ತಂಡಕ್ಕೆ ಈ ಪಂದ್ಯವು ನಿರ್ಣಾಯಕವಾಗಿದೆ. ಏಕೆಂದರೆ ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ರಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿದೆ.
ಗುಜರಾತ್ ಜೈಂಟ್ಸ್ ತಂಡ: ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್, ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಮಾನ್ಸಿ ಜೋಶಿ, ಜಾರ್ಜಿಯಾ ವೇರ್ಹ್ಯಾಮ್, ಮೋನಿಕಾ ಪಟೇಲ್, ಅಶ್ವನಿ ಕುಮಾರಿ, ಹರ್ಲಿ ಗಾಲಾ, ಶಬ್ನಮ್ ಎಂಡಿ ಶಕಿಲ್, ಪರುನಿಕಾ ಸಿಸೋಡಿಯಾ, ಲಾರಾ ವೋಲ್ವಾರ್ಡ್ಟ್
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರೋಡ್ರಿಗಸ್, ಮರಿಝನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಟಾರಾ ನೋರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಅಪರ್ಣಾ ಮೊಂಡಲ್, ಟೈಟಾಸ್ ಸಾಧು, ಸ್ನೇಹಾ ದೀಪ್ತಿ, ಲಾರಾ ಹ್ಯಾರಿಸ್, ಪೂನಂ ಯಾದವ್.