

DC vs GT Live Score, IPL 2023: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ (DC vs GT) ತಂಡಗಳು ಮುಖಾಮುಖಿಯಾಗಲಿದೆ. ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸಿಎಸ್ಕೆ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ತಂಡಕ್ಕೆ ಇಂದು ಅಸಲಿ ಸವಾಲು ಎದುರಾಗಲಿದೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಇಂದು ತನ್ನ ತವರು ಮೈದಾನದಲ್ಲಿ ಆಡುತ್ತಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಇದಕ್ಕೂ ಮುನ್ನ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿತ್ತು. ಇದೀಗ ತವರು ಮೈದಾನದಲ್ಲಿ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆಯುವ ಇದಾರೆಯಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್. ಇನ್ನು ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರಿದ್ದು ಹೀಗಾಗಿ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಬಹುದು.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಶ್, ಸರ್ಫರಾಜ್ ಖಾನ್, ರಿಲೀ ರೊಸ್ಸೋ, ರೋಮನ್ ಪೊವೆಲ್, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಮನೀಶ್ ಪಾಂಡೆ, ಪ್ರವೀಣ್ ದುಬೆ, ಲಲಿತ್ ಯಾದವ್, ಅಭಿಷೇಕ್ ಪೊರೆಲ್, ಫಿಲಿಪ್ ಸಾಲ್ಟ್, ಇಶಾಂತ್ ಶರ್ಮಾ, ಕಮಲೇಶ್ ನಾಗರಕೋಟಿ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್.
ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶ್ವ ಲಿಟಲ್, ಯಶ್ ದಯಾಳ್, ಅಲ್ಜರಿ ಜೋಸೆಫ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಶ್ರೀಕರ್ ಭರತ್, ಅಭಿನವ್ ಮನೋಹರ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಒಡಿಯನ್ ಸ್ಮಿತ್, ಡೇವಿಡ್ ಮಿಲ್ಲರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಶಿವಂ ಮಾವಿ, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.
Views: 0