Delhi Capitals Vs Kolkata Knight Riders : ಐಪಿಎಲ್ 2024 ರ 16 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 106 ರನ್ಗಳಿಂದ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಲೀಗ್ನಲ್ಲಿ ಸತತ ಮೂರನೇ ಗೆಲುವು ದಾಖಲಿಸಿದೆ.

ಐಪಿಎಲ್ 2024 ರ 16 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 106 ರನ್ಗಳಿಂದ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಲೀಗ್ನಲ್ಲಿ ಸತತ ಮೂರನೇ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 272 ರನ್ ಗಳಿಸಿತು. ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಸುನಿಲ್ ನರೈನ್ 7 ಬೌಂಡರಿ ಮತ್ತು 7 ಸಿಕ್ಸರ್‌ಗಳ ಸಹಿತ 85 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರೆ ಇವರ ಹೊರತಾಗಿ ಆಂಡ್ರೆ ರಸೆಲ್ 41 ರನ್ ಮತ್ತು ರಿಂಕು ಸಿಂಗ್ 26 ರನ್‌ಗಳ ಇನಿಂಗ್ಸ್ ಆಡಿದರು. ಗುರಿ ಬೆನ್ನಟ್ಟಿದ ಡೆಲ್ಲಿ ಆರಂಭದಲ್ಲೇ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಬ್ ಪಂತ್ ಹಾಗೂ ಸ್ಟಬ್ಸ್ ಅರ್ಧಶತಕ ಸಿಡಿಸುವ ಮೂಲಕ ತಂಡ 100 ರನ್‌ಗಳ ಒಳಗೆ ಆಲೌಟ್ ಆಗುವುದನ್ನು ತಪ್ಪಿಸಿದರು. ಅಂತಿಮವಾಗಿ ಡೆಲ್ಲಿ ತಂಡ ಪೂರ್ಣ 20 ಓವರ್ಗಳನ್ನು ಆಡದೆ 17.2 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 166 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1