
ಚಿತ್ರದುರ್ಗ, (ಏ.09): ಆಜಾದ್ ಫ್ಲೋರ್‍ಮಿಲ್ ಹಾಗೂ ವೇದಾ ಫೀಡ್ಸ್ ನ ಮುಖ್ಯಸ್ಥರಾಗಿದ್ದ ಜೈನುಲ್ಲಾಬ್ದಿನ್(89) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಗಿನ ಜಾವ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅನೇಕ ದಿನಗಳಿಂದ ಚಿಕಿತ್ಸೆಯಲ್ಲಿದ್ದರು.
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಇಲಾಹಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ-ಕಾರ್ಯದರ್ಶಿಯಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ಬಹಳಷ್ಟು ಹಿರಿಯರ ಒಡನಾಟವಿಟ್ಟುಕೊಂಡಿದ್ದರು.
ಮೃತರು ಪತ್ನಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಸೇರಿದಂತೆ ಆರು ಮಂದಿ ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಚೇಳುಗುಡ್ಡದ ಟಿ.ಎಂ.ಕೆ.ಪೀರ್‍ಸಾಬ್ ಕಾಂಪೌಂಡ್‍ನಲ್ಲಿರುವ ಖಬರಸ್ಥಾನಲ್ಲಿ ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಅಂತಿಮ ದರ್ಶನ : ಮಾಜಿ ಸಚಿವ ಹೆಚ್.ಏಕಾಂತಪ್ಪ, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಎ.ಉಮಾಪತಿ, ಎಸ್.ಕೆ.ಬಸವರಾಜನ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರಪಪ್ಪಿ, ರಘು ಆಚಾರ್, ಭೀಮುಸಮುದ್ರದ ಜಿ.ಎಸ್.ಮಂಜುನಾಥ್, ಮುರುಘಾಮಠದ ಬಸವಪ್ರಭುಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಎಸ್.ಡಿ.ಪಿ.ಐ.ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್, ಜಿಲ್ಲಾ ವಕ್ಫ್‍ಬೋರ್ಡ್ ಚೇರ್ಮನ್ ಎಂ.ಸಿ.ಓ.ಬಾಬು, ಮರ್ಚೆಂಟ್ಸ್ ಸೌಹಾರ್ಧ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ, ವೀರಶೈವ ಸಮಾಜದ ಕೆ.ವಿ.ಪ್ರಭಾಕರ್, ಹಿರಿಯ ಉದ್ಯಮಿ ಚಳ್ಳಕೆರೆಯ ಟಿ.ಎ.ಟಿ.ಪ್ರಭುದೇವ್, ನಗರಸಭೆ ಹಾಲಿ ಹಾಗೂ ಮಾಜಿ ಸದಸ್ಯರುಗಳು ಮೃತರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
The post ಜೈನುಲ್ಲಾಬ್ದಿನ್ ನಿಧನ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/zBW8H07
via IFTTT
Views: 0